ಬುಧವಾರ, ಡಿಸೆಂಬರ್ 1, 2021
20 °C

ಜನ ಸೇಡು ತೀರಿಸಿಕೊಳ್ಳಲಿದ್ದಾರೆ: ಶ್ರೀನಿವಾಸ್ ಮಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಕ್ಕಿಆಲೂರ: ‘ಈ ಸರ್ಕಾರ ಹೆಜ್ಜೆ ಹೆಜ್ಜೆಗೂ ಬಡವರನ್ನು ತುಳಿದಿದೆ. ಬೆಲೆ ಏರಿಕೆಯಿಂದ ಜನಜೀವನ ಕಷ್ಟವಾಗಿದೆ. ಆದಾಯಕ್ಕೆ ಕೊಡಲಿ ಏಟು ಬಿದ್ದಿದೆ. ಈ ಬಾರಿ ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಕಿಚ್ಚು, ಸಿಟ್ಟಿನಿಂದ ಸೇಡು ತೀರಿಸಿಕೊಳ್ಳಲಿದ್ದು, ಜನವಿರೋಧಿ ಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಹೇಳಿದರು.

ಶನಿವಾರ ಮಾರನಬೀಡ, ಉಪ್ಪುಣಸಿ ಹಾಗೂ ಕರಗುದರಿ ಗ್ರಾಮಗಳಲ್ಲಿ ಪ್ರಚಾರ ಸಭೆಗಳಲ್ಲಿ  ಅವರು ಮಾತನಾಡಿದರು.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ,  ಶ್ರೀನಿವಾಸ ಮಾನೆ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಶ್ರೀನಿವಾಸ್ ಮಾನೆ ಅವರಂಥ ಯುವ ನಾಯಕತ್ವದ ಅಗತ್ಯವಿದೆ ಎಂದರು.

ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಮನೋಹರ ತಹಸೀಲ್ದಾರ್, ಸಂತೋಷ್ ಲಾಡ್, ವಿನಯ ಕುಲಕರ್ಣಿ, ಶಿವಶಂಕರ ರೆಡ್ಡಿ, ತುಕಾರಾಮ್, ಸೋಮಣ್ಣ ಬೇವಿನಮರದ, ಎಂ.ಎಂ.ಹಿರೇಮಠ, ಪುಟ್ಟಪ್ಪ ನರೇಗಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು