ಮಂಗಳವಾರ, ಫೆಬ್ರವರಿ 7, 2023
27 °C

ಪಿಎಫ್ಐ ಬ್ಯಾನ್ ಅನ್ನು ವಿರೋಧಿಸಿದರೆ ಜನರೇ ಒದೆಯುತ್ತಾರೆ: ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಪಿಎಫ್ಐ  ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ಈಗಲೂ ಒಳಗೊಳಗೆ ಪ್ರೀತಿ ಇದೆ. ಬ್ಯಾನ್ ವಿರೋಧಿಸಿದವರನ್ನು ಜನ ಒದೆಯುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು. 

ಸವಣೂರು ಪಟ್ಟಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ಐನ ಭಯೋತ್ಪಾದಕ  ಚಟುವಟಿಕೆಗಳು, ದೇಶದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂತಹ ಸಂದರ್ಭದಲ್ಲಿ ಪಿಎಫ್ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

 ಪಿಎಫ್ಐ ಪರ ಮಾತನಾಡಿದರೆ ಎಲ್ಲಿ ದೇಶದ ಜನರ ಕೆಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆಯೋ,  ಎಂಬುದು ಕಾಂಗ್ರೆಸ್ಸಿಗೆ ಚಿಂತೆಯಾಗಿದೆ. ಹೀಗಾಗಿ ಪಿಎಫ್ಐ ಬ್ಯಾನ್ ಮಾಡಿರುವ ಬಿಜೆಪಿ ಸರ್ಕಾರದ ನಿಲುವನ್ನು ವಿರೋಧಿಸಲು ಕಾಂಗ್ರೆಸ್ಸಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಏನಾದರೂ ಮಾಡಿ ಮುಸ್ಲಿಮರ ಓಲೈಕೆ ಮಾಡಬೇಕು ಎಂಬ ಕಾರಣಕ್ಕೆ ಆರ್ ಎಸ್ ಎಸ್ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ ಎಂದು ಕುಟುಕಿದರು.

 ಆರ್ ಎಸ್ ಎಸ್ ಅಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್ ಎಸ್ ಎಸ್ ನಿಂದ ಬಂದವರು. ಆರ್ ಎಸ್ ಎಸ್ ಅನ್ನು ಯಾವ ಆಧಾರದ ಮೇಲೆ ಬ್ಯಾನ್  ಮಾಡುತ್ತೀರಾ? ಈ ಹಿಂದೆ ಕಾಂಗ್ರೆಸ್ ಸರ್ಕಾರ ಆರ್ ಎಸ್ ಎಸ್ ಅನ್ನು  ಮೂರು ಬಾರಿ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ? ಆರೆಸ್ಸೆಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನು ಪ್ರಸ್ತುತಪಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು