ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ದುರಾಡಳಿತಕ್ಕೆ ಬೇಸತ್ತ ಜನತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

Last Updated 25 ಅಕ್ಟೋಬರ್ 2021, 14:35 IST
ಅಕ್ಷರ ಗಾತ್ರ

ತಿಳವಳ್ಳಿ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತ ಜನರುಹಾನಗಲ್‌ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸಮಾನೆ ಅವರನ್ನು ಗೆಲ್ಲಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.

ತಿಳವಳ್ಳಿಯ ಗೇಟ್ ಸರ್ಕಲ್‌ನಿಂದ ಹರ್ಡೀಕರ್ ವೃತ್ತದವರೆಗೂ ರೋಡ್ ಶೋ ನಡೆಸಿ ನಂತರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾನು ಈ ಕ್ಷೇತ್ರದ ಅಳಿಯ ನನ್ನ ಪ್ರತಿಷ್ಠೆ ಉಳಿಸಿ ಅಂತಾ ಮತದಾರರಲ್ಲಿ ಕೇಳುತ್ತಿದ್ದಾರೆ. ಯುವಕರಿಗೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಅಂತಾ ಅಧಿಕಾರಕ್ಕೆ ಬಂದ ಬಿಜೆಪಿ ಉದ್ಯೋಗ ಸೃಷ್ಟಿಸದೆ 4 ಕೋಟಿ ಜನರ ಉದ್ಯೋಗವನ್ನು ಕಸಿದುಕೊಂಡಿದೆ ಎಂದರು.

ವಿದೇಶದಲ್ಲಿ ಇರುವ ಕಪ್ಪು ಹಣವನ್ನು ತರುತ್ತೇನೆ ಆ ಹಣವನ್ನು ಪ್ರತಿಯೊಬ್ಬರ ಖಾತೆಗಳಿಗೆ ₹15 ಲಕ್ಷ ಹಾಕುತ್ತೇನೆ ಎಂದು ಭರವಸೆ ನೀಡಿದ್ದರು, ಖಾತೆಗೆ ಹಣ ಬಂದಿದಿಯಾ ಎಂದು ಪ್ರಶ್ನಿಸಿದರು. ಮೂರೂವರೇ ವರ್ಷದಿಂದ ಮಾನೆ ಅವರು ಕ್ಷೇತ್ರವನ್ನು ಬಿಟ್ಟು ಹೋಗದೆ ಜನರ ಕಷ್ಟ ನೋವುಗಳಿಗೆ ಸ್ಪಂದಿಸಿದ್ದಾರೆ ಆದ್ದರಿಂದ ಮಾನೆ ಅವರನ್ನು 25 ಸಾವಿರ ಮತಗಳಿಂದ ಗೆಲ್ಲಿಸಬೇಕು ಎಂದರು.

ಮಾಜಿ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅನ್ನಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡ ಜನರಿಗೆ ಅನುಕುಲ ಮಾಡಿಕೊಟ್ಟಿದ್ದಾರೆ. ಈ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕು ಎಂದರು.

ಮುಖಂಡರಾದ ಹರೀಶ್‌, ಸಂಜಯ ಗೌಡ, ಯಲ್ಲಪ್ಪ ಕಲ್ಲೇರ, ಫಯಾಜ್ ಲೋಹಾರ, ಚಂದ್ರಪ್ಪ ಜಾಲಗಾರ, ಆರೀಫ್‌ ಲೋಹಾರ, ಶಿವಯೋಗಿ ವಡೆಯರ, ಸಮದ್ ಮೂಡಿ, ವಾಸೀಮ್ ಪಠಣ, ಬಸವರಾಜ ಜೋಗಿ, ರಾಮಣ್ಣ ಶೇಷಗಿರಿ, ಗಣೇಶ ಹುಳ್ಳೇರ, ಸತೀಶ ತಳವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT