ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವ ಸೌರಭದಿಂದ ವ್ಯಕ್ತಿತ್ವ ವಿಕಸನ’

Last Updated 7 ಡಿಸೆಂಬರ್ 2021, 15:47 IST
ಅಕ್ಷರ ಗಾತ್ರ

ಹಾವೇರಿ: ‘ಕೇವಲ ಪಠ್ಯಾಧಾರಿತ ಓದು ಯುವ ಸಮುದಾಯವನ್ನು ಒಂದು ಮಿತಿಯಲ್ಲಿ ನಿಲ್ಲಿಸುತ್ತದೆ. ಹಾಗಾಗಿ ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕೃತಿಕ ಮತ್ತು ಕ್ರೀಡೆ ಚಟುವಟಿಕೆಗಳು ವ್ಯಕ್ತಿಯ ವಿಕಸನಕ್ಕೆ ಕಾರಣವಾಗುತ್ತದೆ. ಯುವ ಸೌರಭದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

ನಗರದ ದೇವರಾಜ ಅರಸು ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಯುವ ಸೌರಭ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಪಾಶ್ಚಾತ್ಯ ಸಂಸ್ಕೃತಿಯತ್ತ ಮಾರು ಹೋಗುತ್ತಿರುವ ಯುವಜನಾಂಗಕ್ಕೆ, ನಮ್ಮ ಸಂಸ್ಕೃತಿ ನಡವಳಿಕೆಗಳು ಆಚಾರ-ವಿಚಾರಗಳ ಕುರಿತಾಗಿ ತಿಳಿವಳಿಕೆ ಹೇಳುವ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಕನ್ನಡ ನಾಡಿನಲ್ಲಿ ಅನೇಕ ಜನಪದ ಕಲಾ ಪ್ರಕಾರಗಳಿದ್ದು, ಅವುಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮುಖ್ಯವಾದುದು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರ ಸ್ವಾಮಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ವಿ.ಎಂ. ಕುಮ್ಮೂರ ಇದ್ದರು. ಜಿ.ಎಚ್ ಕಾಲೇಜಿನ ಪ್ರಾಚಾರ್ಯರಾದ ಡಾ.ಸಂಧ್ಯಾ ಆರ್. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕರಾದ ಶಮಂತ್ ಕುಮಾರ್ ಕೆ.ಎಸ್ ನಿರೂಪಿಸಿ ವಂದಿಸಿದರು.

ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ ಸಾಂಸ್ಕೃತಿಕ ತಂಡಗಳಿಂದ ವೈವಿಧ್ಯಮಯ ಕಲಾ ಪ್ರದರ್ಶನಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT