ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

Last Updated 12 ಆಗಸ್ಟ್ 2022, 13:39 IST
ಅಕ್ಷರ ಗಾತ್ರ

ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಕಟ್ಟಡದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ಇಬ್ಭಾಗವಾದ ಘೋರ ದುರಂತಗಳನ್ನು ಬಿಂಬಿಸುವ ಛಾಯಾಚಿತ್ರಗಳ ಪ್ರದರ್ಶನವನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಉದ್ಘಾಟಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಜಿಲ್ಲಾ ವಾರ್ತಾಧಿಕಾರಿ ಬಿ.ಆರ್.ರಂಗನಾಥ್ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ದೇಶದ ವಿಭಜನೆಯ ಸಂದರ್ಭದಲ್ಲಿ ಅಪಾರ ಪ್ರಮಾಣದ ಸಾವು-ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮ್ಮ ಸಾವಿರಾರು ಸಹೋದರ-ಸಹೋದರಿಯರು ಸ್ಥಳಾಂತರಗೊಂಡರು, ಬುದ್ದಿಗೇಡಿಗಳ ದ್ವೇಷ-ಹಿಂಸಾಚಾರದಿಂದ ಅನೇಕರು ತಮ್ಮ ಪ್ರಾಣ ಕಳೆದುಕೊಂಡರು. ಅನೇಕ ಹೋರಾಟ ಹಾಗೂ ತ್ಯಾಗಳ ಸ್ಮರಣಾರ್ಥವಾಗಿ 14ನೇ ಆಗಸ್ಟ್‌ ಅನ್ನು ದೇಶದ ವಿಭಜನೆಯ ಭಯಾನಕತೆಗಳನ್ನು ಸ್ಮರಿಸುವ ದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಗಸ್ಟ್ 12ರಿಂದ 15ರವರೆಗೆ ಈ ಘಟನೆ ಆಧಾರಿತ ಅಪರೂಪದ ಛಾಯಾಚಿತ್ರಗಳ ಪ್ರದರ್ಶವನ್ನು ಆಯೋಜಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂದೇಶದೊಂದಿಗೆ ಆರಂಭವಾಗುವ ಸಂದೇಶಗಳು, ದೇಶ ವಿಭಜನೆಯ ಸಂದರ್ಭದಲ್ಲಿ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ರೈಲು, ವಾಹನಗಳ ಮೇಲೆ ಸಂಚರಿಸುವ ದೃಶಗಳು, ಹಿಂಸಾಚಾರ, ಸ್ಫೋಟದ ಛಾಯಾಚಿತ್ರಗಳು, 1947 ಮಾರ್ಚ್ 4ರಂದು ನಡೆದ ಹಿಂದೂ-ಸಿಖ್ಖರ ಮೇಲೆ ನಡೆದ ಗುಂಡಿನ ದಾಳಿಗಳ ಛಾಯಾಚಿತ್ರಗಳು ಗಮನಸೆಳೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT