ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಕ್ಸೊ ಪ್ರಕರಣ: ಅಪರಾಧಿಗೆ 20 ವರ್ಷ ಶಿಕ್ಷೆ, ದಂಡ

Published 29 ಮೇ 2023, 16:23 IST
Last Updated 29 ಮೇ 2023, 16:23 IST
ಅಕ್ಷರ ಗಾತ್ರ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಅರ್ಬಾಜ್ ದಸ್ತಗೀರ(20) ಎಂಬಾತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹2.80 ಲಕ್ಷ ದಂಡ ವಿಧಿಸಿ ಹಾವೇರಿಯ ವಿಶೇಷ ಸತ್ರ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶ ನಿಂಗೌಡ ಪಾಟೀಲ ಸೋಮವಾರ ತೀರ್ಪು ನೀಡಿದ್ದಾರೆ.

ಬೆಂಗಳೂರು ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದ ಅರ್ಬಾಜ್ ಎಂಬಾತ ಬಾಲಕಿಗೆ ಮೊಬೈಲ್  ಸಂದೇಶ ಕಳುಹಿಸಿ ಹೊರಗೆ ಕರೆಯಿಸಿ ಅಪಹರಣ ಮಾಡಿ ರಾಣೆಬೆನ್ನೂರ ಹೋಟೆಲ್ ಲಾಡ್ಜ್ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಸೂಲಿಬೆಲೆ ಗ್ರಾಮಕ್ಕೆ ಕರೆದುಕೊಂಡು ಹೋಗಿ ಸ್ನೇಹಿತನ ಮನೆಯಲ್ಲಿಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ರಾಣೇಬೆನ್ನೂರ ಶಹರ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ರಾಣೇಬೆನ್ನೂರು ಶಹರ ವೃತ್ತದ ತನಿಖಾಧಿಕಾರಿ ಸಿಪಿಐ ಎಂ.ಐ. ಗೌಡಪ್ಪಗೌಡ್ರ ಅವರು ತನಿಖೆ ನಡೆಸಿ, ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಮೇಲೆ ಆರೋಪ ರುಜುವಾತಾಗಿದ್ದು  ಆರೋಪಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ₹2.50 ಲಕ್ಷ  ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ರಾಜ್ಯ ಸರ್ಕಾರದಿಂದ ನೊಂದ ಬಾಲಕಿಗೆ 4 ಲಕ್ಷ ಪರಿಹಾರವನ್ನು ನೀಡಬೇಕೆಂದು ತೀರ್ಪು ನೀಡಿ ಆದೇಶ ಮಾಡಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT