ಗುರುವಾರ , ಮಾರ್ಚ್ 30, 2023
32 °C

ಕಲಿಕೆಯಿಂದ ಸಕಾರಾತ್ಮಕ ಬದಲಾವಣೆ ಸಾಧ್ಯ: ನ್ಯಾ.ಕಿರಣ ಕಿಣಿ ಅಭಿಮತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಕಾರಾಗೃಹದಲ್ಲಿರುವ ಬಂದಿಗಳಲ್ಲಿ ಒಂದಿಲ್ಲೊಂದು ಪ್ರತಿಭೆಯಿರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು’ ಎಂದು ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಕಿರಣಿ ಕಿಣಿ ಹೇಳಿದರು.

ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಲಾಬಳಗ, ಆರ್-ಸೆಟಿ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಸಹಯೋಗದಲ್ಲಿ ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಬಂದಿಗಳಿಗೆ ‘ಕಲಿಕೆಯಿಂದ ಬದಲಾವಣೆ’ ಎಂಬ ಶೀರ್ಷಿಕೆಯಡಿಯಲ್ಲಿ ಮೂಲ ಸಾಕ್ಷರತೆ ಕಾರ್ಯಕ್ರಮ ಹಾಗೂ ಕಾಯಂ ಕಲಿಕಾ ಕೇಂದ್ರ ಪ್ರಾರಂಭ ಮತ್ತು 10 ದಿನಗಳ ಫಾಸ್ಟ್ ಫುಡ್‌ ಸ್ಟಾಲ್ ಉದ್ಯಮಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಕಾರಾಗೃಹದಲ್ಲಿ ಸಕಾರಾತ್ಮಕ ವಾತಾವರಣವಿದ್ದು, ಅದನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಜೀವನ ನಿರ್ವಹಣೆ ಮಾಡಿ ಎಂದು ಸಲಹೆ ನೀಡಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ. ಲೋಕೇಶ್ ಮಾತನಾಡಿ, ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳು ಆಸಕ್ತಿಯಿಂದ ಅಕ್ಷರಾಭ್ಯಾಸ ಮಾಡಬೇಕು. ಬಿಡುಗಡೆ ನಂತರವೂ ಶಿಕ್ಷಣವನ್ನು ಮುಂದುವರಿಸಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಬಂದಿಗಳು ತಮ್ಮ ಅಪರಾಧ ಮನೋಭಾವದ ಮನಸ್ಥಿತಿಯಿಂದ ಹೊರಬಂದು ಸುಶಿಕ್ಷಿತರಾಗಿ ಬಿಡುಗಡೆಯಾದ ನಂತರ ಉತ್ತಮ ರೀತಿಯಲ್ಲಿ ಜೀವನ ನಡೆಸಿ ಇತರರಿಗೆ ಮಾದರಿಯಾಗಬೇಕೆಂದು ಹೇಳಿದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಸ್. ಪಾಟೀಲ್ ಅವರು ಸಾಕ್ಷರತಾ ಕಾರ್ಯಕ್ರಮದ ಪ್ರತಿಜ್ಞಾವಿಧಿ ಬೋಧಿಸಿದರು. ತರಬೇತುದಾರರಿಗೆ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ಹಾಗೂ ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಬಂಧಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.

ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಕಲಾ ಬಳಗದ ತಂಡದವರು, ಉಪನ್ಯಾಸಕಿ ಶಾಂತ ಎಂ, ಸಿದ್ಧಾರೂಢ ನಾವಿ, ಸಂತೋಷ್ ಐಹೊಳೆ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು