ಭಾನುವಾರ, ಮೇ 22, 2022
21 °C

ಶಾರ್ಟ್ ಸರ್ಕಿಟ್‌: ಮನೆ, ಅಂಗಡಿ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಕ್ಕಿಆಲೂರ: ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಹಾಗೂ ಕುಶನ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಹಾನಗಲ್ ತಾಲ್ಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ದೂದಿಹಳ್ಳಿ ಹಾಗೂ ಚಂದ್ರಪ್ಪ ದೂದಿಹಳ್ಳಿ ಸಹೋದರರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಮನೆಯ ಚಾವಣಿ ಹಾಗೂ ವಸ್ತುಗಳು ಸುಟ್ಟಿವೆ.

ಮನೆಯ ಪಕ್ಕದ ಕುಶನ್ ಅಂಗಡಿಯೂ ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮನೆಯಲ್ಲಿದ್ದವರೆಲ್ಲ ಹೊರಗೆ ಓಡಿ ಬಂದಿದ್ದಾರೆ. ಹಾನಗಲ್‍ನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು