ಹಾವೇರಿ: ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ನಗರದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಪುನರಾರಂಭಗೊಂಡಿದೆ.
2017ರಲ್ಲಿ ನಗರದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿತ್ತು. ನವಪ್ರಯಾಸ ನವದೆಹಲಿ ಸಂಸ್ಥೆಯವರು 2019ರಿಂದ ಗುತ್ತಿಗೆ ಆಧಾರದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಗುತ್ತಿಗೆದಾರರು 6 ತಿಂಗಳಿಂದ ಬಿಲ್ ಸಲ್ಲಿಸದ ಕಾರಣ ಅನುದಾನ ಬಿಡುಗಡೆಯಾಗದೇ ಕ್ಯಾಂಟೀನ್ ಬಂದ್ ಆಗಿತ್ತು.
ಇಂದಿರಾ ಕ್ಯಾಂಟೀನ್ ಬಂದ್ ಆಗಿದ್ದರಿಂದ, ಹಾವೇರಿ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಗಳು, ಸಂತೆ ಮತ್ತು ತರಕಾರಿ ಮಾರುಕಟ್ಟೆಗೆ ಬರುತ್ತಿದ್ದ ರೈತರು, ಆಟೊ ಚಾಲಕರು, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮಧ್ಯಮ ವರ್ಗದ ಜನರು ತೀವ್ರ ಪರದಾಡುತ್ತಿದ್ದರು.
ಈ ಬಗ್ಗೆ ಪ್ರಜಾವಾಣಿಯಲ್ಲಿ ‘ಇಂದಿರಾ ಕ್ಯಾಂಟೀನ್ ಬಂದ್: ಬಡವರ ಅನ್ನಕ್ಕೂ ಕುತ್ತು’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಟೆಂಡರ್ ಕರೆದು, ಯಾದಗಿರಿಯ ಮಹಿಳಾ ಮಂಡಳಿಯೊಂದಕ್ಕೆ ಗುತ್ತಿಗೆ ನೀಡಿ, ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಕ್ರಮ ಕೈಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.