ತಹಶೀಲ್ದಾರ್ ಎಚ್. ಪ್ರಭಾಕರ್‌ಗೌಡ ಅವರು ಕಚೇರಿಗೆ ಬರುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ಸೂಕ್ತವಾದ ಸ್ಥಳ ಹಾಗೂ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಅನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರವೊಂದನ್ನು ಬರೆದಿದ್ದಾರೆ.