ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ ದುರ್ಬಲಗೊಳಿಸುವ ಸಂಚು: ಪ್ರಹ್ಲಾದ ಜೋಶಿ

Published 7 ಜನವರಿ 2024, 15:59 IST
Last Updated 7 ಜನವರಿ 2024, 15:59 IST
ಅಕ್ಷರ ಗಾತ್ರ

ಹಾವೇರಿ (ಶಿಗ್ಗಾವಿ): ಡಿಜೆ ಹಳ್ಳಿ, ಕೆಜಿ ಹಳ್ಳಿಯವರನ್ನು ಅಮಾಯಕರು ಅಂತ ಹೇಳಿಕೆ ಕೊಡುತ್ತ, ಸಾಕ್ಷಿಗಳನ್ನು ದುರ್ಬಲಗೋಳಿಸಲು ಕಾಂಗ್ರೆಸ್‌ನವರು ಹೊರಟಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಶಿಗ್ಗಾವ ತಾಲ್ಲೂಕಿನ ತಡಸ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಕಸಿತ ಭಾರತ ಮಾಡಲು ಹೊರಟರೆ ರಾಜ್ಯ ಕಾಂಗ್ರೆಸ್ ನವರು ತುಷ್ಟೀಕರಣ ರಾಜಕಾರಣ ಮೂಲಕ ಸಂಕುಚಿತ ಭಾರತ ಮಾಡಲು ಹೊರಟಿದ್ದಾರೆ. ಡಿಜೆ ಹಳ್ಳಿ ಮತ್ತು ಕೆಜಿಹಳ್ಳಿ ಪ್ರಕರಣದ ಆರೋಪಿಗಳನ್ನು ಅಮಾಯಕರು ಎಂದು ಹೇಳಿಕೆ ನೀಡುತ್ತಾರೆ. ಇದನ್ನು ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲಿಬಾನ್ ರೀತಿ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಭಾರತೀಯರ ರಕ್ತ ಮತ್ತು ಪರಂಪರೆಯಲ್ಲಿ ಪ್ರಜಾಪ್ರಭುತ್ವವಿದೆ. ಈ ರೀತಿ ಮಾಡಲು ಹೋದರೆ ಜನರು ನಿಮ್ಮನ್ನು ಎಲ್ಲಿಗೆ ಸೇರಿಸಬೇಕೋ ಅಲ್ಲಿಗೆ ಸೇರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಅವರ ಮೇಲೆ ಒಂದೂ ಕೇಸ್ ಇಲ್ಲ. ನೀವು ಕ್ಷಮೆ ಕೇಳುತ್ತೀರಾ? 16 ಕೇಸ್ ಎಂದು ಯಾರು ವರದಿ ನೀಡಿದ್ದಾರೋ ಅವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ? ಎಂದು ಮುಖ್ಯಮಂತ್ರಿಯವರಿಗೆ ಕೇಂದ್ರ ಸಚಿವ ಜೋಶಿ ಪ್ರಶ್ನಿಸಿದರು.

‘ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗೆ ಅಧಿಕಾರದ ಮದ ಏರಿದೆ’

ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಅನ್ಯಾಯದ ವಿರುದ್ಧ ದನಿ ಎತ್ತಿದವರ ಮೇಲೆ ಕೇಸ್ ಹಾಕಿದ್ದಾರೆ. ಈ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದ ಏಳೇ ತಿಂಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಅಧಿಕಾರದ ಮದ ಏರಿದೆ. ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಗೆ ಸ್ಪರ್ಧೆ ಮಾಡಲ್ಲ: ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರ ಮತ್ತೊಮ್ಮೆ ಸ್ಪಷ್ಟಪಡಿಸಿದ ಬೊಮ್ಮಾಯಿ ‘ಈ ಸಂಬಂಧ ಯಾರು ನನ್ನ ಜೊತೆಗೆ ಮಾತಾಡಿಲ್ಲ. ನಾನು ನಿಲ್ಲುವುದಿಲ್ಲ ಎಂದು ಹೇಳಿದ್ದೇನೆ. ಚುನಾವಣೆಯಲ್ಲಿ ಹಲವಾರು ಜನರ ಹೆಸರು ಓಡಾಡುತ್ತವೆ. ಹಾಗಂತ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ’ ಎಂದರು.

ಹೈಕಮಾಂಡ್ ತಮ್ಮ ಹೆಸರು ಸೂಚಿಸಿದರೆ ಎಂಬ ಪ್ರಶ್ನೆಗೆ ಮೌನಕ್ಕೆ ಶರಣಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT