ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣ ಮಂಡಳಿಯಿಂದ ಪ್ರತಿಭೋತ್ಸವ ನಾಳೆ

Last Updated 22 ಜುಲೈ 2022, 15:25 IST
ಅಕ್ಷರ ಗಾತ್ರ

ಹಾವೇರಿ: ‘ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪ್ರತಿಭೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಜು.24ರಂದು ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‍ನಲ್ಲಿ ಆಯೋಜಿಸಲಾಗಿದೆ’ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಹ ಕಾರ್ಯದರ್ಶಿ ವಿಜಯ ನಾಡಜೋಶಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಜಗದೀಶ ಶೆಟ್ಟರ್, ಗಣಿ ಸಚಿವ ಹಾಲಪ್ಪ ಆಚಾರ್‌, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌, ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ. ಜೊತೆಗೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಬ್ರಾಹ್ಮಣ ಸಮಾಜಕ್ಕೆ ದೊರಕುವ ಸುಮಾರು 15 ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಾಹ್ಮಣ ಸಮಾಜದ ಪ್ರಮುಖರಾದ ಪ್ರಭಾಕರಾವ್ ಮಂಗಳೂರ, ವಸಂತ ಮೊಕ್ತಾಲಿ, ಸುದರ್ಶನ ದಿಂಡಿಹಳ್ಳಿ, ದೀಪಾ ಪಾಟೀಲ, ಸರಿತಾ ದೀಕ್ಷಿತ್‌, ಪವನ ಬಹದ್ದೂರ ದೇಸಾಯಿ, ಹನುಮಂತನಾಯ್ಕ್ ಬಾದಾಮಿ, ಮಹಾದೇವಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT