ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಸಂಜಯ ಶೆಟ್ಟೆಣ್ಣವರ

ಸರ್ಕಾರಿ ಕಚೇರಿ, ವೃತ್ತಗಳಿಗ ದೀಪಾಲಂಕಾರ: ಜಿಲ್ಲಾಧಿಕಾರಿ ಸೂಚನೆ
Last Updated 27 ಜುಲೈ 2021, 13:50 IST
ಅಕ್ಷರ ಗಾತ್ರ

ಹಾವೇರಿ: 75ನೇ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಸ್ವಾತಂತ್ರ್ಯೋತ್ಸವ ಪೂರ್ವ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಆಗಸ್ಟ್ 15ರ ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಇದಕ್ಕೂ ಮುನ್ನ ಹುತಾತ್ಮ ಮೈಲಾರ ಮಹದೇವ ಅವರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನೆರವೇರಿಸಲಾಗುವುದು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಲ್ಲ ಸರ್ಕಾರಿ ಕಚೇರಿಗಳು ಹಾಗೂ ವೃತ್ತಗಳಿಗೆ ದೀಪಾಲಂಕಾರ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಬಯಲು ಪ್ರದೇಶದಲ್ಲಿ 200ಕ್ಕಿಂತ ಹೆಚ್ಚು ಜನರು ಸೇರುವ ಹಾಗಿಲ್ಲ. ಈ ಮಿತಿಯೊಳಗೆ ಕಾರ್ಯಕ್ರಮ ಆಯೋಜಿಸುವುದು. 10 ವರ್ಷಕ್ಕಿಂತ ಕಡಿಮೆ ವಯೋಮಾನ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದವರನ್ನು ಕಡ್ಡಾಯವಾಗಿ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ನಿರ್ಭಂಧಿಸಲಾಗಿದೆ.

ಸಮಾರಂಭದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಕ್ರೀಡಾಂಗಣದಲ್ಲಿ ಅಂತರ ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ, ಜ್ವರ ತಪಾಸಣೆ ವ್ಯವಸ್ಥೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಮಾರಂಭದಲ್ಲಿ ಪೊಲೀಸ್, ಹೋಂಗಾರ್ಡ್, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಅರಣ್ಯ ಇಲಾಖೆಯ ತಲಾ ಐದು ಜನರ ತಂಡದಂತೆ ಕವಾಯತ್‌ನಲ್ಲಿ ಭಾಗವಹಿಸಲು ಅವಕಾಶವಿದೆ. ಕೋವಿಡ್ ವಾರಿಯರ್‌ಗಳಾದ ವೈದ್ಯರು, ಆರೋಗ್ಯ ಕಾರ್ಯಕರ್ತರು, ಸ್ವಚ್ಛತಾ ಕಾರ್ಯಕರ್ತರು, ರಕ್ಷಣಾ ಇಲಾಖೆ ಸಿಬ್ಬಂದಿಗೆ ಮಾತ್ರ ಸನ್ಮಾನ ಕಾರ್ಯಕ್ರಮ ನಡೆಸುವುದು. ಈ ಕುರಿತಂತೆ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಯಿತು.

ವಿದ್ಯಾರ್ಥಿಗಳಿಂದ ಮೆರವಣಿಗೆ ಕಾರ್ಯಕ್ರಮ ಇರುವುದಿಲ್ಲ. ಸರಳ ಮತ್ತು ಅರ್ಥಪೂರ್ಣವಾಗಿ ನಡೆಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ, ಧ್ವಜಾರೋಹಣಕ್ಕೆ ಸಿದ್ಧತೆ, ಆಮಂತ್ರಣ ಪತ್ರಿಕೆ, ಶ್ಯಾಮಿಯಾನ ವ್ಯವಸ್ಥೆ, ದೀಪಾಲಂಕಾರ ಕುರಿತಂತೆ ವಿವಿಧ ಅಧಿಕಾರಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಪೌರಾಯುಕ್ತ ಪರಶುರಾಮ ಚಲವಾದಿ, ತಹಶೀಲ್ದಾರ್‌ ಗಿರೀಶ ಸ್ವಾದಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT