ಸೋಮವಾರ, ಜೂನ್ 21, 2021
28 °C

ಎಎಸ್‌ಐ ರುದ್ರಪ್ಪಗೆ ರಾಷ್ಟ್ರಪತಿ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಣೆಬೆನ್ನೂರು: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ನೀಡುವ ‘ಪ್ರಶಂಸನೀಯ ಸೇವಾ ಪದಕ’ ಕ್ಕೆ ರಾಣೆಬೆನ್ನೂರಿನ ಗ್ರಾಮೀಣ ವೃತ್ತ ಕಚೇರಿಯ ಎಎಸ್‌ಐ ರುದ್ರಪ್ಪ ಎನ್. ಬಾಳಿಕಾಯಿ ಅವರು ಆಯ್ಕೆಯಾಗಿದ್ದಾರೆ.

ಕಳೆದ ವರ್ಷ ಅವರಿಗೆ ಮುಖ್ಯಮಂತ್ರಿಗಳ ಪದಕ ಸಂದಿತ್ತು.

ರುದ್ರಪ್ಪ ಅವರು ಪೊಲೀಸ್‌ ಇಲಾಖೆಗೆ ಸೇರುವ ಮೊದಲು ಗುಡ್ಡದಮಲ್ಲಾಪುರ ಖಾಸಗಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಉತ್ತಮ ಕ್ರೀಡಾ ಪಟುವಾಗಿರುವ ಅವರು ಜಿಲ್ಲಾ ಮಟ್ಟದಲ್ಲಿ ನಡೆಯುವ ಪೊಲೀಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಗ್ಗ ಜಗ್ಗಾಟ ಮತ್ತು ಕಬಡ್ಡಿಯಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.  ಪ್ರಶಸ್ತಿಗೆ ಆಯ್ಕೆಯಾಗಿರುವ ಅವರನ್ನು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಅಭಿನಂದಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು