ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಡಿಮೆ ದರದಲ್ಲಿ ಗುಣಮಟ್ಟದ ಶಿಕ್ಷಣ: ಪಾಟೀಲ

Published 13 ಏಪ್ರಿಲ್ 2024, 16:11 IST
Last Updated 13 ಏಪ್ರಿಲ್ 2024, 16:11 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಎಲ್ಲರೂ 90 ಅಂಕಗಳಿಗೆ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಾರೆ. ನಮ್ಮಲ್ಲಿ ಬಡವರು, ಮಧ್ಯಮ ವರ್ಗದವವರಿಗೆ ಮತ್ತು ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವುದು ಸಂಸ್ಥೆಯ ಸದುದ್ದೇಶವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಸವರಾಜ ಎನ್‌. ಪಾಟೀಲ ಹೇಳಿದರು.

ಇಲ್ಲಿನ ಎಪಿಎಂಸಿ ರಸ್ತೆಯ ಅಶೋಕನಗರದ ಅಂಚೆ ಕಚೇರಿ ಹಿಂಭಾಗದಲ್ಲಿರುವ ನಾಗಶಾಂತಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ರೈಟ್‌ ಅಕಾಡೆಮಿಯಿಂದ ಬೇಸಿಗೆ ರಜೆಯ ಅಂಗವಾಗಿ 75 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ. ಕಾಲೇಜಿನಲ್ಲಿ ಕಲಿತು ಮೆಡಿಕಲ್‌ ಓದುವ ವಿದ್ಯಾರ್ಥಿಗಳಿಗೆ ₹25 ಸಾವಿರ ಮತ್ತು ಎಂಜಿನಿಯರಿಂಗ್‌ ಓದುವ ವಿದ್ಯಾರ್ಥಿಗಳಿಗೆ ₹5000 ಹಣವನ್ನು ನಮ್ಮ ಸಂಸ್ಥೆಯಿಂದ ಸಹಾಯಧನ ನೀಡಲಾಗುವುದು ಎಂದರು.

ಹೆಚ್ಚಿನ ಮಾಹಿತಿಗೆ 7996877631, 9353191792 ಸಂಪರ್ಕಿಸಬಹುದು.

ಪ್ರಾಚಾರ್ಯ ಗಣೇಶ ಪಂಡಿತ, ಉಮೇಶ ಬೆಳ್ಳೂಡಿ, ಬಸವರಾಜ ಸುರಕೋಡ, ರವಿಕುಮಾರ ಟಿ.ಆರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT