ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಕ್ರಮ ಸಾಗಣೆ ತಡೆಗಟ್ಟಿ: ನ್ಯಾಯಾಧೀಶ ಪುಟ್ಟರಾಜು

Last Updated 3 ಫೆಬ್ರುವರಿ 2023, 15:45 IST
ಅಕ್ಷರ ಗಾತ್ರ

ಹಾವೇರಿ: ‘ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಪಾತ್ರವೂ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪುಟ್ಟರಾಜು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ‘ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿ.ಪಂ.ಉಪ ಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಪ್ರತಿ ಪ್ರಜೆಗಳೂ ತಮ್ಮ ವೈಯಕ್ತಿಕ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಿದರೆ ಅನೈತಿಕ ಸಾಗಾಣಿಕೆಯನ್ನು ತಡೆಯಬಹುದು. ತಳಮಟ್ಟದಿಂದಲೇ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಪೆನಲ್ ವಕೀಲರಾದ ಎನ್.ಎನ್.ದಿಳ್ಳೆಪ್ಪನವರ ಹಾಗೂ ಪಿ.ಎಂ.ಬೆನ್ನೂರು ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್ ಮಜೀದ್ ಇದ್ದರು.

ಪ್ರಭಾರ ಮಹಿಳಾ ಮತ್ತು ಮಕ್ಕಳ ಅಧಿಕಾರಿ ಶಾಂತಾ ಹುಳ್ಳೇರ ಸ್ವಾಗತಿಸಿದರು. ಯಲ್ಲಪ್ಪ ಬಾಲಣ್ಣನವರ ನಿರೂಪಿಸಿದರು. ಹನುಮಂತಗೌಡ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT