ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ನೀಡಲು ಖಾಸಗಿ ಶಿಕ್ಷಕರ ಮನವಿ

Last Updated 22 ಅಕ್ಟೋಬರ್ 2020, 14:27 IST
ಅಕ್ಷರ ಗಾತ್ರ

ಹಾವೇರಿ: ಸರ್ಕಾರದಿಂದ ವೇತನ ನೀಡುವಂತೆ ಒತ್ತಾಯಿಸಿ ರಾಜ್ಯ ಖಾಸಗಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಒಕ್ಕೂಟದಿಂದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಸಾವಿರಾರು ಶಿಕ್ಷಣ ಸಂಸ್ಥೆಗಳಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಕಾರ್ಯ ನಿರ್ವಹಿಸುತ್ತಿದ್ದು, ಕೋವಿಡ್-19 ಕಾರಣದಿಂದಾಗಿ ಮಾರ್ಚ್ 2020ರಿಂದ ಶಾಲೆಗಳನ್ನು ಸರ್ಕಾರದ ಆದೇಶದಂತೆ ಸ್ಥಗಿತಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೂ ವೇತನ ಇಲ್ಲದಿರುವುದರಿಂದ ಜೀವನ ದುಸ್ತರವಾಗಿದೆ.ಕುಟುಂಬ ನಿರ್ವಹಣೆ ತುಂಬಾ ಕಷ್ಟವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಬೇಡಿಕೆಗಳು: ಮಾರ್ಚ್ 2020ರಿಂದ ಶಾಲೆ ಆರಂಭವಾಗುವವರೆಗೂ ಸರ್ಕಾರಿಂದ ಪ್ರತಿ ತಿಂಗಳು ವೇತನ ಪಾವತಿಸಬೇಕು. ಶಿಕ್ಷಕರ ಬ್ಯಾಂಕ್ ಖಾತೆಗೆ ನೇತವಾಗಿ ವೇತನ ಸೇರಬೇಕು. ಸರ್ಕಾರಿ ಶಿಕ್ಷಕರ ನೇಮಕಾತಿ(ಸಿಇಟಿ) ಪರೀಕ್ಷೆಯಲ್ಲಿ ಒಂದು ವರ್ಷ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ 2 ಕೃಪಾಂಕ ನೀಡಬೇಕು. ಖಾಸಗಿ ಶಾಲಾ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಬಡಿಗೇರ, ಜಿಲ್ಲಾ ಕಾರ್ಯದರ್ಶಿ ಸುಭಾಷ್ ಯಲ್ಲಾಪುರ, ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಹರಳೇಶ್ವರ, ಜಿಲ್ಲಾ ನಿರ್ದೇಶಕ ವಿಜಯಕುಮಾರ್, ಹಾನಗಲ್ ತಾಲ್ಲೂಕು ಅಧ್ಯಕ್ಷ ರಮೇಶ್‍ಭರಮಣ್ಣ ಮಡಿವಾಳ, ಕಾರ್ಯದರ್ಶಿ ಸತೀಶ್‍ಬೆಣ್ಣಿ, ಉಪಾಧ್ಯಕ್ಷ ವಿಜಯಕುಮಾರ್ ಮುಡಿಮಠ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT