ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸದೃಢ ನಾಡು ನಿರ್ಮಾಪಕ ಶಿಕ್ಷಕ: ಸೋಮಣ್ಣ

Published : 5 ಸೆಪ್ಟೆಂಬರ್ 2024, 16:12 IST
Last Updated : 5 ಸೆಪ್ಟೆಂಬರ್ 2024, 16:12 IST
ಫಾಲೋ ಮಾಡಿ
Comments

ಶಿಗ್ಗಾವಿ:‘ಶಿಕ್ಷಕರು ಸದೃಢ ನಾಡು ನಿರ್ಮಾಪಕರಾಗಿದ್ದು, ಗುರುವಿನ ಅನುಗ್ರಹದಿಂದ ಪ್ರತಿ ಕಾರ್ಯಗಳು ಸುಮಗವಾಗಿ ಸಾಗಲು ಸಾಧ್ಯವಿದೆ. ಹೀಗಾಗಿ ಗುರುವಿನ ಸಂದೇಶಗಳನ್ನು ಅರಿತು ಅವರ ಮಾರ್ಗದರ್ಶದಲ್ಲಿ ನಡೆದಾಗ ಬದುಕು ಯಶಸ್ವಿಯಾಗಲು ಸಾಧ್ಯವಿದೆ’ ಎಂದು ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ತಾಲ್ಲೂಕಿನ ಗಂಜೀಗಟ್ಟಿಯಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬಿಇಒ ಅಂ.ಬಿ.ಅಂಬಿಗೇರ, ತಹಶೀಲ್ದಾರ್ ಸಂತೋಷ ಹಿರೇಮಠ, ತಾಪಂ.ಇಒ ಪಿ.ವಿಶ್ವನಾಥ, ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಮಾತನಾಡಿದರು.

ಗಂಜೀಗಟ್ಟಿ ಗುರುಚರಮೂರ್ತೇಶ್ವರ ಮಠದ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿಗ್ಗಾವಿ ವಿರಕ್ತಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಹುಬ್ಬಳ್ಳಿ ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಎಫ್.ಬಿ.ಸೊರಟೂರ ಉಪನ್ಯಾಸ ನೀಡಿದರು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪುರಸಭೆ ಉಪಾಧ್ಯಕ್ಷೆ ಶಾಂತಾಬಾಯಿ ಸುಭೆದಾರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಅರುಣ ಹುಡೇದಗೌಡ್ರ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎಫ್.ಸಿ.ಕಾಡಪ್ಪಗೌಡ್ರ, ಶಿಕ್ಷಣ ಸಮನ್ವಯಾಧಿಕಾರಿ ಗೀತಾಂಜಲಿ ತೆಪ್ಪದ, ಹೈಹಿಕ ಶಿಕ್ಷಣ ಪರಿವೀಕ್ಷಕ ಪ್ರತಾಪ ನಾಯಕ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗಪ್ಪ ಬೆಂತೂರ, ಅಕ್ಷರ ದಾಸೋಹ ಅಧಿಕಾರಿ ಮಂಜುನಾಥ ಸಾಳುಂಕೆ ಸೇರಿದಂತೆ ವಿವಿಧ ಶಿಕ್ಷಕರ ಸಂಘಟನೆಗಳ, ಕನ್ನಡಪರ ಸಂಘಟನೆಗಳ
ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT