ಹಾವೇರಿ: ‘ಬಾಲ್ಯವಿವಾಹ ತಡೆಗಟ್ಟುವುದು ಮತ್ತು ಮಕ್ಕಳನ್ನು ಹಲವಾರು ರೀತಿಯ ದೌರ್ಜನ್ಯಗಳಿಂದ ರಕ್ಷಣೆ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾವೇರಿ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಪೋಕ್ಸೊ ಕಾಯ್ದೆ-2012 ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕುರಿತು ಗುತ್ತಲ ಹೋಬಳಿ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಟಿ ಬಸವೇಶ್ವರ ಸಮುದಾಯ ಭವನದಲ್ಲಿ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಮಾತನಾಡಿ, ಬಾಲ್ಯವಿವಾಹ ಪದ್ಧತಿ ನಿರ್ಮೂಲನೆ ಮಾಡಿ, ಹೆಣ್ಣು ಮಕ್ಕಳನ್ನು ರಕಿಸಬೇಕು. ಈ ಕುರಿತು ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು. ನಿಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹಾಗೂ ಮಕ್ಕಳಿಗೆ ಯಾವುದಾದರೂ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098ಕ್ಕೆ ಕರೆ ಮಾಡಿ ಎಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ವಿನಯ ಗುಡಗೂರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮುತ್ತುರಾಜ ಮಾದರ, ಉಪನ್ಯಾಸಕರಾಗಿ ಎಂ. ಆರ್. ಜಾಲಗಾರ, ವಿಶೇಷ ಬಾಲ ಪೊಲೀಸ್ ಘಟಕ, ಎಂ.ಬಿ. ಬಸವನಾಯಕರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.