ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಸೋಮವಾರ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು.

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಬಿ.ಸಿ.ಪಾಟೀಲ ಅವರು ಅಜ್ಞಾನಿ ಎಂದು ಕರೆದಿರುವುದನ್ನು ಖಂಡಿಸುತ್ತೇವೆ. ದುರಹಂಕಾರ ಪ್ರದರ್ಶಿಸಿರುವ ಬಿ.ಸಿ.ಪಾಟೀಲ ಅವರು ರೈತ ಸಂಘದ ಕ್ಷಮೆ ಕೋರಬೇಕು. ಇಲ್ಲದಿದ್ದರೆರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ರೈತ ಮುಖಂಡರಾದ ರಾಜು ತರ್ಲಘಟ್ಟ, ರುದ್ರಪ್ಪ ಬಳಿಗಾರ, ಎಂ.ಎನ್.ನಾಯಕ, ಈರಪ್ಪ ಮುದಿಯಪ್ಪನವರ, ಚನ್ನಪ್ಪ ಮರಡೂರ, ಮುತ್ತು ಗುಡಗೇರಿ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.