ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಹೇರಿಕೆ: ಕರವೇ ಖಂಡನೆ

Last Updated 14 ಸೆಪ್ಟೆಂಬರ್ 2020, 14:53 IST
ಅಕ್ಷರ ಗಾತ್ರ

ಹಾವೇರಿ:ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಸೆ.14ರಂದು ‘ಹಿಂದಿ ಸಪ್ತಾಹ’ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದನ್ನು ವಿರೋಧಿಸಿ,ಸತೀಶಗೌಡ ಜೀ ಮುದಿಗೌಡ್ರ ನೇತ್ವತ್ವದಲ್ಲಿ ಕರವೇ ಮುಖಂಡರುಹಾವೇರಿ ತಹಶೀಲ್ದಾರ್‌ ಶಂಕರ್‌ ಜಿ.ಎಸ್‌. ಅವರಿಗೆ ಮನವಿ ಸಲ್ಲಿಸಿದರು.

ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತ ಹಲವಾರು ಭಾಷೆ ಮತ್ತು ವಿಭಿನ್ನ ರೀತಿಯ ಸಂಸ್ಕೃತಿಯನ್ನು ಹೊಂದಿರುವ ‘ವಿವಿಧತೆಯಲ್ಲಿ ಏಕತೆ’ ಹೊಂದಿರುವ ಪ್ರಜಾಪ್ರಭುತ್ವ ದೇಶವಾಗಿದೆ. ಆದರೆ ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವುದು ಸರಿಯಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಆಯಾ ರಾಜ್ಯದಲ್ಲಿ ಅಲ್ಲಿನ ಸ್ಥಳೀಯ ನುಡಿಯ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಮೂಲಕ ಭಾರತದ ಭಾಷಾ ವೈವಿಧ್ಯತೆಯನ್ನು ಗೌರವಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಕರವೇ ಪ್ರಧಾನ ಕಾರ್ಯದರ್ಶಿ ಯಶವಂತಗೌಡ ದೊಡ್ಡಗೌಡ್ರ, ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಲೇಶ ಹಾಲಣ್ಣನವರ, ಗುತ್ತಲ ನಗರ ಘಟಕದ ಉಪಾಧ್ಯಕ್ಷ ಫಕ್ರುದ್ದೀನ ಅಂಗಡಿಕಾರ, ಹಾವೇರಿ ನಗರ ಘಟಕದ ಉಪಾಧ್ಯಕ್ಷ ಚೇತನ ಕುರುಬಗೊಂಡ, ನಾಗಯ್ಯ ಹಿರೇಮಠ, ಮಾರುತಿ ಮಂಜುನಾಥ ಕುರುಬರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT