ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ವಿಮೆ: ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Published 3 ಜೂನ್ 2024, 16:17 IST
Last Updated 3 ಜೂನ್ 2024, 16:17 IST
ಅಕ್ಷರ ಗಾತ್ರ

ಬ್ಯಾಡಗಿ: ಪ್ರಸಕ್ತ ಸಾಲಿನ ಬೆಳೆವಿಮೆ ಪರಿಹಾರ ಹಣ ವಿತರಣೆಯಲ್ಲಿ ಕಂದಾಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ‘ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿಗೆ ಯಾವ ಮಾಹಿತಿ ಇಲ್ಲದಂತಾಗಿದ್ದು, ಯಾವ ಮಾಹಿತಿ ಕೇಳಿದರೂ ಹಾರಿಕೆ ಉತ್ತರ ನೀಡುತ್ತಾರೆ. ಪ್ರತಿಭಟನೆ ಮಾಡಿದರೆ ಮಾತ್ರ ಸೌಲಭ್ಯ ಪಡೆಯುವಂತಹ ದುಃಸ್ಥಿತಿ ನಿರ್ಮಾಣವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳು ಕೂಡಲೇ ಇಲ್ಲಿಯ ಸಿಬ್ಬಂದಿ ಮೇಲೆ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು. ಸಹಾಯವಾಣಿಯಲ್ಲಿ ದಾಖಲಾದ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದರು.

ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ‘ತಾಲ್ಲೂಕಿನಲ್ಲಿ 16 ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಬ್ಬೊಬ್ಬರಿಗೆ ಎರಡು ಸಾಜಾಗಳ ಉಸ್ತುವಾರಿ ನೀಡಲಾಗಿದೆ. ಯಾರೊಬ್ಬರೂ ಕೇಂದ್ರ ಸ್ಥಾನದಲ್ಲಿ ವಾಸವಾಗಿಲ್ಲ. ಬೆಳಗ್ಗೆ 12ಕ್ಕೆ ಬರುವ ಅವರು ಒಂದು ಗ್ರಾಮಕ್ಕೆ ತೆರಳಿ ಮಧ್ಯಾಹ್ನ 3 ಗಂಟೆಗೆ ವಾಪಸ್ಸು ಹೋಗುತ್ತಾರೆ. ಅಧಿಕಾರಿಗಳು ಸಕಾಲಕ್ಕೆ ದೊರೆಯದ ಹಿನ್ನೆಲೆಯಲ್ಲಿ ಎಜೆಂಟರಿಗೆ ಕನಿಷ್ಠ ₹200 ಲಂಚಕೊಟ್ಟು ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.

ಬಳಿಕ ಶಿರಸ್ತೆದಾರ ನಾಗರತ್ನಾ ಕಾಳೆ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ರೈತ ಮುಖಂಡ ಗಂಗಣ್ಣ ಎಲಿ, ರುದ್ರಗೌಡ್ರ ಕಾಡನಗೌಡ್ರ, ನಿಂಗಪ್ಪ ಮಾಸಣಗಿ, ಮಲ್ಲೇಶಪ್ಪ ಡಂಬಳ ಹಾಗೂ ಇನ್ನಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT