ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಡ್ಸೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ದೇಶಕ್ಕೆ ಅವಮಾನ ಮಾಡಿದ ಬಿಜೆಪಿಯು ಬೇಷರತ್ ಕ್ಷಮೆಯಾಚಿಸಬೇಕು: ಹಿರೇಮಠ
Last Updated 18 ಮೇ 2019, 14:48 IST
ಅಕ್ಷರ ಗಾತ್ರ

ಹಾವೇರಿ: ಮಹಾತ್ಮ ಗಾಂಧಿ ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಬಿಜೆಪಿ ನಾಯಕರು ನೀಡಿದ ಹೇಳಿಕೆಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಮೈಲಾರ ಮಹದೇವಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಜೆ.ಪಿ. ಸರ್ಕಲ್ ಮೂಲಕ ಹೊಸ್ಮನಿ ಸಿದ್ದಪ್ಪ ವೃತ್ತದವರೆಗೆ ಬಂದು ಪ್ರತಿಭಟಿಸಿದರು. ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ಭೋಪಾಲ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗೋಡ್ಸೆ ದೇಶಭಕ್ತ ಎಂದು ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯ ಪರ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ನಳೀನ್‌ ಕುಮಾರ ಕಟೀಲ್ ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಮಹಾತ್ಮ ಗಾಂಧಿ ಅವಮಾನಿಸಿದ ಬಿಜೆಪಿ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಶ್ರಮಿಸಿದ ಗಾಂಧೀಜಿ ಬಗ್ಗೆ ಬಿಜೆಪಿ ನಾಯಕರ ಹೇಳಿಕೆಯು ಖಂಡನೀಯವಾಗಿದೆ. ಇದು ಗಾಂಧಿಜಿಯವರಿಗೆ ಮಾಡಿದ ಅವಮಾನವಾಗಿದೆ. ದೇಶಭಕ್ತಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ನಿಜವಾದ ಬಣ್ಣ ಬಯಲಾಗಿದೆ. ಗಾಂಧಿ ಕೊಂದ ಗೋಡ್ಸೆ ಬಿಜೆಪಿಯವರಿಗೆ ದೇಶಭಕ್ತನಂತೆ ಕಾಣುತ್ತಿದ್ದಾನೆ. ದೇಶದ ಇತಿಹಾಸವನ್ನೇ ಬಿಜೆಪಿ ತಿರುಚಲು ಹೊರಟಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಎಸ್‌ಎಫ್‌ಎನ್ ಗಾಜೀಗೌಡ್ರ, ಜಿಲ್ಲಾ ಪಂಚಾಯ್ತಿ ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಪಾಟೀಲ, ತಾಲ್ಲೂಕು ಘಟಕದ ಎಂ.ಎಂ. ಮೈದೂರ, ಜಯಶ್ರೀ ಶಿವಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT