ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಜಾರಿಗೆ ಆಗ್ರಹ

Last Updated 24 ಸೆಪ್ಟೆಂಬರ್ 2020, 15:42 IST
ಅಕ್ಷರ ಗಾತ್ರ

ಹಾವೇರಿ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಅನುಷ್ಠಾನ ಮಾಡುವಂತೆ ಹಾಗೂ ರಾಜ್ಯ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಗುರುವಾರನಡೆದ ಬೃಹತ್ ಪ್ರತಿಭಟನೆ ನಡೆಯಿತು. ಹಾವೇರಿ ಜಿಲ್ಲೆಯಿಂದ ಹೆಚ್ಚಿನ ಜನರು ಭಾಗಿಯಾಗಿದ್ದರು.

ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಮಾತನಾಡಿ, ‘ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನ ಪೀಠವು ಇತ್ತೀಚೆಗೆ ನೀಡಿರುವ ತೀರ್ಪನ್ನು ಡಿಎಸ್‌ಎಸ್ ಸಂಘಟನೆ ಸ್ವಾಗತಿಸುತ್ತದೆ. ಆರ್ಥಿಕವಾಗಿ ಸಾಮಾಜಿಕವಾಗಿ, ರಾಜಕೀಯವಾಗಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗಾಗಿ ಪರಿಶಿಷ್ಟರಿಗೆ ಒಳಮೀಸಲಾತಿ ಅಗತ್ಯವಾಗಿದೆ. ಇತರ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಮೀಸಲಾತಿಯಡಿ ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಂಡಿರುತ್ತಾರೆ. ಹೀಗಾಗಿ ಸದಾಶಿವ ಆಯೋಗ ಜಾರಿಗೆ ಬರಬೇಕು. ಸರ್ಕಾರ ಕೂಡಲೇ ಈ ಬೇಡಿಕೆಯನ್ನು ಇಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಡಿಎಸ್‌ಎಸ್ ರಾಜ್ಯ ಸಂಚಾಲಕ ಸತ್ಯ ಭದ್ರವತಿ, ಎಸ್.ಎಂಬಳ್ಳಾರಿ, ಶ್ರೀಧರ ಕಲವೀರ, ಎಸ್.ಎನ್.ಮಲ್ಲಪ್ಪ, ಮಾಲತೇಶ ಯಲ್ಲಾಪೂರ, ನಿಂಗಣ್ಣ ಕಡೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT