ರಾಣೆಬೆನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ರಾಜ್ಯಪಾಲರ ಧೋರಣೆ ಖಂಡಿಸಿ ತಾಲ್ಲೂಕಿನ ದೇವರಗುಡ್ಡ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ಗ್ರಾಮದ ವಕೀಲ ನಾಗರಾಜ ಸಂಶಿ ಮಾತನಾಡಿ, 'ರಾಜ್ಯಪಾಲರು ಕೇಂದ್ರ ಸರ್ಕಾರದ ಅಣತಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೀಡಿರುವುದು ಕಾನೂನುಬಾಹಿರ. ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆ ಕಾಪಾಡಬೇಕು. ಅದನ್ನು ಬಿಟ್ಟು ರಾಜ್ಯದಲ್ಲಿ ಕೇಂದ್ರ ಸರ್ಕಾರd ಪರವಾಗಿ ರಾಜಕೀಯ ಮಾಡಬಾರದು’ ಎಂದು ದೂರಿದರು.
‘ರಾಜ್ಯ ಪಾಲರ ಧೋರಣೆ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ಮುಖ್ಯಮಂತ್ರಿ ಅಭಿಮಾನಿಗಳು ನಿರ್ಧರಿಸಿದ್ದಾರೆ. ಪ್ರತಿಯೊಂದು ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.