ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ: ವಿವಿಧ ಬೇಡಿಕೆ ಈಡೇರಿಕಗೆ ಆಗ್ರಹಿಸಿ ಫೆ.27 ರಂದು ಪ್ರತಿಭಟನೆ

Published 26 ಫೆಬ್ರುವರಿ 2024, 13:42 IST
Last Updated 26 ಫೆಬ್ರುವರಿ 2024, 13:42 IST
ಅಕ್ಷರ ಗಾತ್ರ

ಬ್ಯಾಡಗಿ: ‘ರೈತರ ಬೆಳೆಗೆ ವೈಜ್ಙಾನಿಕ ಬೆಲೆ ನಿಗದಿಪಡಿಸುವ ಕಾನೂನಿಗೆ ಮಾನ್ಯತೆ ನೀಡುವುದು, ಬರ ಪರಿಹಾರ, ಪ್ರತ್ಯೇಕ ಡಿಸಿಸಿ ಬ್ಯಾಂಕ್, ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿ ಕಣ್ಣೀರಿಡುತ್ತಿದ್ದಾರೆ, ಎಂಎಸ್‌ಪಿಯನ್ನು ಕಾನೂನಿನ ಚೌಕಟ್ಟಿಗೆ ಒಳಪಡಿಸುವಂತೆ ನಡೆಯುತ್ತಿರುವ ರೈತ ಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ರೈತ ಸಂಘ ಕೂಡ ಬೆಂಬಲ ವ್ಯಕ್ತಪಡಿಸಿದೆ. ರೈತರ ಖಾತೆಗೆ ₹2 ಸಾವಿರ ಹಾಕಿರುವ ರಾಜ್ಯ ಸರ್ಕಾರ ಇನ್ನುಳಿದ ತನ್ನ ಪಾಲಿನ ಪರಿಹಾರದ ಹಣ ಇಂದಿಗೂ ಹಾಕಿಲ್ಲ. ಕೊಟ್ಟ ಹಣವನ್ನೂ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಮರಳಿಸಿದ್ದೇವೆ. ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ರೈತರಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯದಿರುವುದು ರೈತರಲ್ಲಿ ಆತಂಕ ಹೆಚ್ಚಿಸಿದೆ ಎಂದರು.

ರೈತ ಮುಖಂಡರಾದ ಗಂಗಣ್ಣ ಎಲಿ, ಚಿಕ್ಕಪ್ಪ ಛತ್ರದ, ಕಿರಣ ಗಡಿಗೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT