ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಬಹಿಷ್ಕರಿಸಿ ಪ್ರತಿಭಟನೆ

Last Updated 24 ಸೆಪ್ಟೆಂಬರ್ 2020, 16:08 IST
ಅಕ್ಷರ ಗಾತ್ರ

ಹಾವೇರಿ: ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಕರ್ತವ್ಯ ಬಹಿಷ್ಕರಿಸಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಗುರುವಾರ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸೆ.22ರಿಂದ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದ್ದ ಹೊರಗುತ್ತಿಗೆ ನೌಕರರು, ಗುರುವಾರ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖ ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯುತ್ತದೆ ಎಂದು ತಿಳಿಸಿದರು.

ಸೇವಾ ಭದ್ರತೆ ನೀಡಿ, ಕೆಲಸವನ್ನು ಕಾಯಂಗೊಳಿಸಬೇಕು, ಎಲ್ಲ ಹುದ್ದೆಗಳಿಗೆ ವೇತನ ಭತ್ಯೆ ಮತ್ತು ವೇತನ ಶ್ರೇಣಿಯನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿ ಮಾಡಬೇಕು, ಎನ್‌.ಎಚ್.ಎಂ. ಅಡಿಯಲ್ಲಿ ಕೆಲಸ ಮಾಡುವ ನೌಕರರಿಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಬೋನಸ್‌ ಹೆಚ್ಚಳವನ್ನು ಕಾರ್ಯಗತಗೊಳಿಸಲು ಒತ್ತಾಯಿಸಿದರು.

ಹಾವೇರಿ ಜಿಲ್ಲಾ ಶಾಖೆಯನ್ನು ಗುರುವಾರ ಅಧಿಕೃತವಾಗಿ ರಚನೆ ಮಾಡಿದರು. ಅಧ್ಯಕ್ಷ ವಸಂತಕುಮಾರ ಗೌಡ್ರ, ಗೌರವಾಧ್ಯಕ್ಷ ಮಲ್ಲಿಕಾರ್ಜುನಯ್ಯ ಎಸ್.ಎನ್‌., ಖಜಾಂಚಿ ಸುರೇಶ್‌, ಸದಸ್ಯ ಕಾರ್ಯದರ್ಶಿ ಡಾ.ಸಂತೋಷ ಹಾಲುಂಡಿ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT