ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಕಲ್ಪಿಸಿ

Last Updated 4 ಫೆಬ್ರುವರಿ 2023, 16:16 IST
ಅಕ್ಷರ ಗಾತ್ರ

ಹಾವೇರಿ: ನಗರದ ಜಿಲ್ಲಾ ಆಸ್ಪತ್ರೆ ಆವರಣದ ಹಿಂಭಾಗದಲ್ಲಿರುವ ಹಿರಿಯ ನಾಗರಿಕ ಹೊರ ಮತ್ತು ಒಳ ರೋಗಿಗಳ ವಿಭಾಗದ ಕಟ್ಟಡದಲ್ಲಿ ನಡೆಯುತ್ತಿರುವ ಪ್ಯಾರಾ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಹಾವೇರಿ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ 2021 ಜನವರಿಯಲ್ಲಿ ಪ್ರಾರಂಭವಾದ ಸರ್ಕಾರಿ ಅರೆ ವೈದ್ಯಕೀಯ ವಿಜ್ಞಾನ ವಿದ್ಯಾಸಂಸ್ಥೆಯ ಕಾಲೇಜಿನಲ್ಲಿ 5 ವಿಭಾಗಗಳಿದ್ದು, ಈ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸೂಕ್ತವಾದ ಕೊಠಡಿಯ ವ್ಯವಸ್ಥೆ, ಕಾಯಂ ನುರಿತ ಉಪನ್ಯಾಸಕರಿಲ್ಲದೆ ಮತ್ತು ಸಿಬ್ಬಂದಿ ಕೊರತೆ ಸೇರಿದಂತೆ ಮೂಲಸೌಕರ್ಯಗಳಿಂದ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಕಡೆ ಗಮನ ನೀಡಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐ ತಾಲ್ಲೂಕು ಕಾರ್ಯದರ್ಶಿ ಕಾವ್ಯಾ ಹನಗೋಡಿಮಠ, ಮುಖಂಡರಾದ ರಾಹುಲ್ ಕಡೆಮನಿ, ಪವನ ಎಚ್ ಆರ್, ಪವಿತ್ರಾ ಆಲದಕಟ್ಟಿ, ಚಿನ್ನಮ್ಮ ಎನ್ ಎಚ್, ಲತಾ ಎಮ್, ಶಿವರಾಜ ಬಿ ಕೆ, ಚಂದನಾ ಆರ್, ಐಶ್ವರ್ಯ ಎ, ಪಲ್ಲವಿ ಜಿ, ಲಕ್ಷ್ಮಿ, ಸುವರ್ಣ ಎನ್.ಡಿ. ಹಾಗೂ ಇತರ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT