ಹಿರೇಕೆರೂರ: ‘ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಅನೇಕ ಅಪರಾಧ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ’ ಎಂದು ಪಿಎಸ್ಐ ನೀಲಪ್ಪ ನರಲಾರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಪೊಲೀಸ್ ಇಲಾಖೆ ವತಿಯಿಂದ ನಡೆದ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಜಾಲತಾಣಗಳ ದುರ್ಬಳಕೆಯಿಂದ ಪೋಕ್ಸೋ ಕಾಯ್ದೆ ಅಡಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರಕರಣಗಳು ದಾಖಾಲಾಗುತ್ತಿವೆ. ವಿದ್ಯಾರ್ಥಿಗಳು ಮೋಬೈಲ್ ಫೋನ್ನ್ನು ಜ್ಞಾನಾರ್ಜನೆಗೆ ಮಾತ್ರ ಬಳಸಬೇಕು. ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ’ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಶಿಕ್ಷಕ ಎನ್.ಸುರೇಶಕುಮಾರ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಕಾನೂನಿನ ತಿಳಿವಳಿಕೆಯ ಕೊರತೆಯಿಂದ ಅನೇಕ ಅಪರಾಧಗಳು ಆಗುತ್ತಿವೆ. ಇಂದಿನ ವಿದ್ಯಾರ್ಥಿಗಳು ಕಾನೂನು ಬಾಹಿರವಾಗಿ ಲೈಸೆನ್ಸ್ ಇಲ್ಲದೆ ಬೈಕ್ ಓಡಿಸುವುದು ಹಾಗೂ ಅನವಶ್ಯಕವಾಗಿ ಮೊಬೈಲ್ ಬಳಸುವುದು, ಅದರಲ್ಲಿ ಬರುವ ಅಶ್ಲೀಲ ವಿಡಿಯೊಗಳನ್ನು ನೋಡುವುದು, ಇದರಿಂದ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಲಾಗದೆ ಅಪರಾಧಗಳನ್ನು ಮಾಡುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳಿಂದ ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದಾಗ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತದೆ’ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮೇಘರಾಜ ಮಾಳಗಿಮನಿ, ಸುಧಾ ಡಿ ಬಣಕಾರ, ಪ್ರಕಾಶ ವಾರದ, ನಟರಾಜ, ಕೆ.ಎಚ್. ಕಾಟೇನಹಳ್ಳಿ , ಸುಮಾ ಎಸ್., ಶಿವಕುಮಾರ ಸಾಲೇರ, ಪರಮೇಶ್ವರ ಹುಲ್ಮನಿ, ಬಸನಗೌಡ ಬಣಕಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.