ಗುರುವಾರ, 7 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಸಿಸಿಟಿವಿ ಕ್ಯಾಮೆರಾ ಶೀಘ್ರ ಅಳವಡಿಸಲು ಡಿ.ಸಿ ಸೂಚನೆ

ಹಳೆಯ ಕ್ಯಾಮೆರಾ ದುರಸ್ತಿಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಡಿ.ಸಿ ಸೂಚನೆ
Last Updated 13 ಆಗಸ್ಟ್ 2021, 16:12 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿರುವ ನಗರ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಮುಂದಿನ ಹದಿನೈದು ದಿನದೊಳಗಾಗಿ ಅಗತ್ಯವಿರುವೆಡೆ ಹೊಸ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಹಾಗೂ ಹಳೆಯ ಕ್ಯಾಮೆರಾಗಳನ್ನು ದುರಸ್ತಿಗೊಳಿಸುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉನ್ನತ ಪೊಲೀಸ್ ಅಧಿಕಾರಿಗಳ ಸಂಪರ್ಕಿಸಿ ತಕ್ಷಣವೇ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮವಹಿಸಬೇಕು. ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪದೇ ಪದೇ ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಅಪಘಾತಕ್ಕೆ ಕಾರಣಗಳನ್ನು ಪತ್ತೆ ಮಾಡಿ ಲೋಪವನ್ನು ಸರಿಪಡಿಸಬೇಕು. ರಸ್ತೆ ಉಬ್ಬುಗಳು ವೈಜ್ಞಾನಿಕವಾಗಿ ಇರುವಂತೆ ನೋಡಿಕೊಳ್ಳಬೇಕು. ಸಾರಿಗೆ ಮಾರ್ಗಸೂಚಿ ಫಲಕಗಳನ್ನು ಅಳವಡಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.

ಹೆದ್ದಾರಿ ಮಾರ್ಗದಲ್ಲಿ ಈಗಾಗಲೇ ಗುರುತಿಸುವ ಏಳು ಬ್ಲಾಕ್ ಸ್ಪಾಟ್‌ಗಳಲ್ಲಿ ಹೆಚ್ಚಿನ ಸುರಕ್ಷತೆಗೆ ಕ್ರಮವಹಿಸಬೇಕು. ದುರಸ್ತಿ ಕಾರ್ಯ, ಸಂಚಾರಿ ಸಿಗ್ನಲ್‌ಗಳ ಅಳವಡಿಕೆ ಸೇರಿದಂತೆ ಹೆಚ್ಚಿನ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ವಿಶ್ಲೇಷಣೆ, ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸಿ ಸೂಕ್ತ ಕ್ರಮ ಕೈಗೊಳ್ಳುವುದು, ಸಾರ್ವಜನಿಕರಲ್ಲಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮತ್ತು ಅರಿವಿನ ಕಾರ್ಯಕ್ರಮಗಳನ್ನು ಮೂಡಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೆಬೀಹಾಳ, ನಗರಾಭಿವೃದ್ಧಿ ಯೋಜನಾಧಿಕಾರಿ ಯೋಜನಾ ನಿರ್ದೇಶಕ ವಿರಕ್ತಿಮಠ, ಹಾವೇರಿ, ರಾಣೆಬೆನ್ನೂರು ನಗರಸಭೆ ಪೌರಾಯುಕ್ತರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT