ಮಂಗಳವಾರ, ಡಿಸೆಂಬರ್ 10, 2019
26 °C

ಹಾವೇರಿ: ಜಿಲ್ಲೆಯ ವಿವಿಧೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದ ಆಸುಪಾಸು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ವಿವಿಧೆಡೆ ಗುರುವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಚದುರಿದಂತೆ ಅಲ್ಲಲ್ಲಿ ಮಳೆ ಸುರಿದಿದ್ದು, ನಗರದ ಕೆಲವೆಡೆ ತುಂತುರು ಹನಿಯೂ ಸುರಿದಿಲ್ಲ. ಆದರೆ, ಮೋಡ ಕವಿದ ವಾತಾವರಣ ಇತ್ತು.

ಉಳಿದಂತೆ ಜಿಲ್ಲೆಯ ಹಾನಗಲ್‌, ಹಿರೇಕೆರೂರ ತಾಲ್ಲೂಕುಗಳಲ್ಲಿ ಹಾಗೂ ಬಂಕಾಪುರ, ಬರಗೂರ, ಕುರುಬರ ಮಲ್ಲೂರು ವ್ಯಾಪ್ತಿಯಲ್ಲಿ ತುಂತುರು ಮಳೆಯಾಗಿದೆ. ಶಿಗ್ಗಾವಿ, ಬ್ಯಾಡಗಿ, ರಾಣೆಬೆನ್ನೂರು, ಸವಣೂರ ತಾಲ್ಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು