ತಾಲ್ಲೂಕಿನಲ್ಲಿ ಮಳೆಯಾಶ್ರಿತ ಮತ್ತು ನೀರಾವರಿ ಸೇರಿ ಒಟ್ಟು 9 ಸಾವಿರ ಹೆಕ್ಟೇರ್‌ನಲ್ಲಿ ಹಿಂಗಾರು ಬೆಳೆ ಬೆಳೆಯಲಾಗುತ್ತಿದೆ. ಈ ಬಾರಿಯ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ಬೆಳೆಗಳನ್ನು ನಾಶ ಮಾಡಿ ಹಿಂಗಾರು ಬಿತ್ತನೆ ಕಾರ್ಯಕ್ಕೆ ಭೂಮಿ ಹದ ಮಾಡಿಕೊಂಡಿದ್ದರು. ಇದೀಗ ಉತ್ತಮ ಮಳೆಯಾಗಿದ್ದು, ಮಳೆಯಾಶ್ರಿತ ಭೂಮಿಯಲ್ಲಿ ಜೋಳ, ಕುಸುಬೆ, ಅಲಸಂದೆ, ಕಡಲೆ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತಿದೆ. ನೀರಾವರಿ ಭೂಮಿಯಲ್ಲಿ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಯಲು ರೈತರು ಮುಂದಾಗಿದ್ದಾರೆ.