ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ ಉಪಾಧ್ಯಕ್ಷರಾಗಿ ರಾಜೇಶ್ವರಿ ಆಯ್ಕೆ

Last Updated 15 ಸೆಪ್ಟೆಂಬರ್ 2020, 15:15 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ತಿಳವಳ್ಳಿ ಜಿಲ್ಲಾ ಪಂಚಾಯಿತಿಮತಕ್ಷೇತ್ರದ ರಾಜೇಶ್ವರಿ ಕಲ್ಲೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗಿರಿಜವ್ವ ಬ್ಯಾಲದಹಳ್ಳಿ ಅವರ ರಾಜೀನಾಮೆಯಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್ ನೇತೃತ್ವದಲ್ಲಿ ಚುನಾವಣೆ ನಡೆಯಿತು.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ 21 ಸದಸ್ಯರು ಭಾಗವಹಿಸಿದ್ದರು. 34 ಸದಸ್ಯ ಬಲದ ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಕೋರಂ ಭರ್ತಿಯಾಗಲು 18 ಸದಸ್ಯರ ಹಾಜರಾತಿ ಅವಶ್ಯವಿತ್ತು. ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಸಿದ ರಾಜೇಶ್ವರಿ ಯಲ್ಲಪ್ಪ ಕಲ್ಲೇರ ಅವರನ್ನು ಚುನಾವಣಾ ನಿಯಮಗಳ ಅನುಸಾರ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಅವರು ಘೋಷಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಅವರು ನಾಮಪತ್ರ ಸ್ವೀಕಾರ ಹಾಜರಾತಿ ಸೇರಿದಂತೆ ಚುನಾವಣೆ ಪ್ರಕ್ರಿಯೆ ನಿರ್ವಹಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಹಾಗೂ ಬೆಳಗಾವಿ ಪ್ರೊಬೇಷನರಿ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT