ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ಬಿಡಲಿ: ಶಾಸಕ ರಮೇಶ ಜಾರಕಿಹೊಳಿ

ಅರಳೇಶ್ವರ ಗ್ರಾಮದಲ್ಲಿ ಪ್ರಚಾರ
Last Updated 26 ಅಕ್ಟೋಬರ್ 2021, 16:09 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್‌ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಮತೋಲನ ಕಳೆದುಕೊಂಡು ಮಾತನಾಡುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಟೀಕಿಸಿದರು.

ತಾಲ್ಲೂಕಿನ ಅರಳೇಶ್ವರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಪ್ರಚಾರ ನಡೆಸಿದ ಅವರು, ಸಿದ್ದರಾಮಯ್ಯ ಒಳ್ಳೆಯ ನಾಯಕ. ನಾನು ಕಾಂಗ್ರೆಸ್‌ನಲ್ಲಿದ್ದಾಗ ಅವರನ್ನು ಹತ್ತಿರದಿಂದ ಬಲ್ಲೆ. ಆದರೆ, ಚುನಾವಣೆ ಸಂದರ್ಭಅವರನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ. ಅವರು ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ನಾಯಕರು ಸುಳ್ಳು ಮತ್ತು ಅಪಪ್ರಚಾರ ಮಾಡಿಯೇ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಸ್ವಯಂ ಪ್ರೇರಣೆಯಿಂದ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ ಎಂದರು.

ನಾವು ಹಿಂದುತ್ವದ ಮೇಲೆ ಮತ ಕೇಳುತ್ತಿದ್ದೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರುವ ಎಲ್ಲರನ್ನೂ ಸ್ವಾಗತಿಸುತ್ತೇವೆ. ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಉತ್ತಮ ಒಲವು ವ್ಯಕ್ತವಾಗುತ್ತಿದೆ. ಬೂತ್‌ ಮಟ್ಟದಲ್ಲೂ ಉತ್ತಮ ಕಾರ್ಯಕರ್ತರ ಪಡೆ ಇದೆ. ಹೀಗಾಗಿ ಶಿವರಾಜ ಸಜ್ಜನರ ಗೆಲುವು ನಿಶ್ಚಿತ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಮತ್ತಷ್ಟು ಶಕ್ತಿ ನೀಡಬೇಕು. ಉಪಚುನಾವಣೆಯಲ್ಲಿ ಗೆದ್ದ ಮೇಲೆ ಬೊಮ್ಮಾಯಿ ರಾಜ್ಯದ ದೊಡ್ಡ ಲೀಡರ್ ಆಗಲಿದ್ದಾರೆ ಎಂದು ಹೇಳಿದರು.

ಪ್ರಮುಖರಾದ ಬಸವರಾಜ ತೋಟದ, ಸಾಗರ ಸಜ್ಜನರ, ಜಗದೀಶಯ್ಯ ಹಿರೇಮಠ, ತಿಪ್ಪನಗೌಡ ಪಾಟೀಲ, ಮಲ್ಲೇಶ ಕೂಡಲ, ಯಲ್ಲಪ್ಪ ಕರಿಭೀಮಣ್ಣನವರ, ಉಮೇಶ ಚೋವಣ್ಣನವರ, ಶೇಖರ ಕಳ್ಳಿಮನಿ, ಸುರೇಶ ಅರಳೇಶ್ವರ, ರಮೇಶ ತಳವಾರ, ಕೃಷ್ಣ ಜವಳಿ, ಅಶೋಕ ತಳವಾರ, ರಾಜಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT