ರಾಣೆಬೆನ್ನೂರು: ಮುಂಗಾರು ಹಂಗಾಮಿನ ಬೆಳೆಗಳಲ್ಲಿ ಆಧುನಿಕ ಕೃಷಿ, ಬೆಳೆಗಳ ವೈವಿಧ್ಯತೆ, ಕೃಷಿ ಯಂತ್ರೋಪಕರಣ ಹಾಗೂ ನೈಸರ್ಗಿಕ ಕೃಷಿ ಪದ್ಧತಿಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಎಸ್. ಎ. ಗದ್ದನಕೇರಿ ಹೇಳಿದರು.

ತಾಲ್ಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಬ್ಯಾಡಗಿ ತಾಲ್ಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ಐ.ಸಿ.ಎ.ಆರ್. ಸಂಸ್ಥೆಗಳು, ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರದ (ಕೆ.ವಿ.ಕೆ.) ವಿಜ್ಞಾನಿಗಳನ್ನು ಒಳಗೊಂಡ ಎರಡು ತಂಡಗಳು ಮತ್ತು ಇತರ ಇಲಾಖೆಗಳಾದ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಪಾಲನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಗಳ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಎ.ಎಚ್.ಬಿರಾದಾರ ಮಾತನಾಡಿ, ‘ಕೃಷಿ ಸಮುದಾಯಕ್ಕೆ ಸಾವಯವ, ನೈಸರ್ಗಿಕ ಕೃಷಿಯಲ್ಲಿ ಮಣ್ಣಿನ ಫಲವತ್ತತೆ ಕಾಪಾಡುವಲ್ಲಿ ಎರೆಹುಳುಗಳು ಪ್ರಮುಖ ಪಾತ್ರವಹಿಸುತ್ತವೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಜೂನ್ 12ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ’ ಎಂದರು.

ಹಾವೇರಿ ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕ ಕರಿಯಲ್ಲಪ್ಪ ಕೆ. ಅವರು ರೈತರಿಗೆ ಕೃಷಿ ಇಲಾಖೆಯಿಂದ ದೊರಕುವ ಸೌಲಬ್ಯಗಳ ಬಗ್ಗೆ ಮಾಹಿತಿ ಮಾಹಿತಿ ನೀಡಿದರು. ರೈತ ಶಂಕರಗೌಡ ಪಾಟೀಲ ಅವರು ಸಾವಯವ ಕೃಷಿಯಲ್ಲಿನ ತಮ್ಮ ಅನುಭವವನ್ನು ಹಂಚಿಕೂಂಡರು.

ಇಫ್ಕೋ ಸಂಸ್ಥೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಸಂತೋಷ ಎಚ್. ಎಂ, ಮಹೇಶ ಕಡಗಿ, ಬಸಮ್ಮ ಹಾದಿಮನಿ, ಅಕ್ಷತಾ ರಾಮಣ್ಣನವರ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದ್ಯಸರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.