ರಾಣೆಬೆನ್ನೂರು: ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ತತ್ವಗಳು ಇಂದಿಗೂ ಯುವಜನರಿಗೆ, ಸಮಾಜಕ್ಕೆ ಸಮಾನತೆ ಮತ್ತು ಪ್ರಗತಿಯ ದಾರಿಯನ್ನು ತೋರಿಸುತ್ತಿವೆ. ಅವರ ಆದರ್ಶಗಳು ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿವೆ. ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ವಿರುದ್ಧ ದಿಟ್ಟ ಹೋರಾಟ ಮಾಡಿದವರು. ಬಾಬಾಸಾಹೇಬರ ಆದರ್ಶಗಳು ನಮ್ಮ ಬದುಕಿಗೆ ದಾರಿದೀಪವಾಗಲಿ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಇಲ್ಲಿನ ನಗರಸಭೆ ಆವರಣದ ಸಮೀಪ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ವಿವಿಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಒಕ್ಕೂಟಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ಕೇವರ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಸಹೋದರತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಾವು ಎಲ್ಲರೂ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಇನ್ನೂ ಅಸ್ಪೃಶ್ಯತೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅಸಮಾನತೆ ಇದೆ. ಅಸಮಾನತೆ ಹೊಗಲಾಡಿಸಬೇಕು ಅಂದರೆ ಶಿಕ್ಷಣ ಪಡೆಯಬೇಕು’ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ.ಮೋಹನ ಬೆಣಗೇರಿ ಅವರು ಬಿ.ಆರ್.ಅಂಬೇಡ್ಕರ್ ಬಗ್ಗೆ, ಆರ್ಟಿಇಎಸ್ ಕಾಲೇಜಿನ ಪ್ರೊ.ಮಾಲತೇಶ ಪೂಜಾರ ಅವರು ಜಗಜೀವನರಾಂ ಅವರ ಕುರಿತು ಉಪನ್ಯಾಸ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿರೇಶ ಮೋಟಗಿ, ಮಂಜುನಾಥ ಕೆಂಚರಡ್ಡಿ, ರವೀಂದ್ರಗೌಡ ಎಫ್. ಪಾಟೀಲ, ರಮೇಶ ಕೊರವರ, ತಹಶೀಲ್ದಾರ ಆರ್.ಎಚ್. ಭಾಗವಾನ, ತಾಲ್ಲುಕು ಪಂಚಾಯಿತಿ ಇಒ ವೆಂಕಟೇಶ ಸಣ್ಣಬಿದರಿ, ಡಿವೈಎಸ್ಪಿ ಲೊಕೇಶ ಜೆ., ಪೌರಾಯುಕ್ತ ಎಫ್.ವೈ .ಇಂಗಳಗಿ, ಬಿಇಒ ಶಾಮಸುಂದರ ಅಡಿಗ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಲತೇಶ ಇದ್ದರು.

ಭಾವಚಿತ್ರದ ಮೆರವಣಿಗೆ: ಇಲ್ಲಿನ ಹರಳಯ್ಯನಗರದ ಮಾಯಮ್ಮದೇವಿ ದೇವಸ್ಥಾನದಿಂದ ನಗರಸಭೆ ಹತ್ತಿರದ ಅಂಬೇಡ್ಕರ್ ವೃತ್ತದ ವರೆಗೂ ಉಭಯ ನಾಯಕರ ಭಾವಚಿತ್ರದ ಮೆರವಣಿಗೆಯು ಸಕಲ ವಾದ್ಯಗಳೊಂದಿಗೆ ಅದ್ದೂರಿಯಾಗಿ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-949718504

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.