ರಾಣೆಬೆನ್ನೂರು: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ, ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಇತರೆ ಒಕ್ಕೂಟಗಳ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನ ಆಚರಣೆ ಮತ್ತು ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನವನ್ನು ಏ.14 ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ನಗರಸಭೆಯ ಬಳಿ ಇರುವ ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ನಡೆಯಲಿದೆ.

ಇಲ್ಲಿನ ಹರಳಯ್ಯನಗರದ ಮಾಯಮ್ಮದೇವಿ ದೇವಸ್ಥಾನದಿಂದ ನಗರಸಭೆ ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಭಾವ ಚಿತ್ರಗಳ ಮೆರವಣಿಗೆ ನಡೆಯಲಿದೆ. ಸುಣಕಲ್ಲಬಿದರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಮೋಹನ್ ಬೆಣಗೇರಿ ಹಾಗೂ ಆರ್ಟಿಇಎಸ್ ಕಾಲೇಜಿನ ಪ್ರೊ. ಮಾಲತೇಶ ಪೂಜಾರ ಅವರು ಉಪನ್ಯಾಸ ನೀಡಲಿದ್ದಾರೆ.

ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸುವರು. ತಹಶೀಲ್ದಾರ ಆರ್.ಎಚ್. ಭಾಗವಾನ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿರೇಶ ಮೋಟಗಿ, ತಾಲ್ಲೂಕು ಪಂಚಾಯಿತಿ ಇಓ ವೆಂಕಟೇಶ ಸಣ್ಣಬಿದರಿ, ಪೌರಾಯುಕ್ತ ಎಫ್.ವೈ. ಇಂಗಳಗಿ, ಡಿವೆಐಎಸ್ಪಿ ಜೆ. ಲೊಕೇಶ, ಬಿಇಒ ಶಾಮಸುಂದರ ಅಡಿಗ, ಸಮಾಜ ಕ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಕಾವ್ಯಶ್ರಿ , ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮಂಜುನಾಥ ಕೆಂಚರಡ್ಡಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-22-329489764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.