ರಾಣೆಬೆನ್ನೂರು: ಎಪಿಎಂಸಿ ಜಾನುವಾರು ಮಾರುಕಟ್ಟೆ ಯಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಈಗಾಗಲೇ ಸಾರಿಗೆ ಸಚಿವರನ್ನು ಕರೆಸಿ ಜಾಗೆ ಗುರುತಿಸಲಾಗಿತ್ತು. ಅಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳು ತೊಂದರೆ ಆಗುತ್ತದೆ. ನಗರದ ಮಧ್ಯವರ್ತಿ ಸ್ಥಳವಾಗಿರುವ ನಗರಸಭೆ ಕ್ರೀಡಾಂಗಣ ದಲ್ಲಿ 3 ರಿಂದ 4 ಎಕರೆ ಜಾಗೆ ಆದರೆ ಬಸ್ ನಿಲ್ದಾಣಕ್ಕೆ ಸೂಕ್ತವಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗಾಗಿ ನಗರಸಭೆ ಕ್ರೀಡಾಂಗಣದಲ್ಲಿ ಬಸ್ ನಿಲ್ದಾಣ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಪಡೆಯಲು ನಗರಸಭೆಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಮೇ 4ರಂದು ಬೆಳಿಗ್ಗೆ 10.30ಕ್ಕೆ ಸಾರ್ವಜನಿಕ ಸಭೆ ಕರೆಯಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.

ಇಲ್ಲಿನ ವಾಗೀಶನಗರದ ಗೃಹ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಪಿಎಂಸಿ ವ್ಯಾಪಾರಸ್ಥರು, ನೆಹರು ಮಾರುಕಟ್ಟೆ ವರ್ತಕರು, ಕರವೇ, ವಿವಿಧ ಪಕ್ಷಗಳ ಮುಖಂಡರು, ಆಟೊ ಚಾಲಕರು, ನಗರಸಭೆ ಮಾಜಿ ಸದಸ್ಯರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕು. ನಿಮ್ಮೆಲ್ಲರ ಅಭಿಪ್ರಾಯ ಪಡೆದು ಸಾಧಕ ಬಾಧಕ ನೋಡಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-22-151498209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.