ರಾಣೆಬೆನ್ನೂರು: ‘ಬೂತ್ ಮಟ್ಟದ ನಾಯಕರ ಚಟುವಟಿಕೆಗಳು ಪಕ್ಷದ ನಿಜವಾದ ಬೆನ್ನೆಲುಬಾಗಿವೆ. ಬೂತ್ ಜೀತಾ ತೋ ದೇಶ್ ಜೀತಾ. ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುವುದು ಅತ್ಯಂತ ಪ್ರಮುಖವಾಗಿದೆ’ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಇಲ್ಲಿನ ವಿನಾಯಕನಗರದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಕಾಂಗ್ರೆಸ್ ಬೂತ್ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಕಾರ್ಯಕರ್ತನೂ ಜನರ ಸಂಪರ್ಕವನ್ನು ವಿಸ್ತರಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು. ಮುಂದಿನ ದಿನಗಳಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು, ಪಕ್ಷದ ಕಾರ್ಯಕರ್ತರು ಇನ್ನಷ್ಟು ಸಂಘಟಿತರಾಗಿ ಕೆಲಸ ಮಾಡಬೇಕು’ ಎಂದರು.

ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಪುಟ್ಟಪ್ಪ ಮರಿಯಮ್ಮನವರ ಮಾತನಾಡಿ, ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳಿಗೆ ಸಾಕಷ್ಟು ನೆರವಾಗುತ್ತಿವೆ. ಅಂತಹ ಯೋಜನೆಗಳನ್ನು ಟೀಕೆ ಮಾಡುತ್ತ, ಗ್ಯಾರಂಟಿ ನಿಲ್ಲಿಸುವ ಪ್ರಯತ್ನಗಳನ್ನು ಬೇರೆ ಪಕ್ಷಗಳು ಮಾಡುತ್ತಿವೆ. ಜನಸಾಮಾನ್ಯರ ಜೀವನ ಮಟ್ಟ ಮೇಲಕ್ಕೆತ್ತುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿವೆ’ ಎಂದರು.

ಗ್ರಾಮೀಣ ಘಟಕದ ಅಧ್ಯಕ್ಷ ಚಂದ್ರಪ್ಪ ಬೇಡರ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕಿನ 60 ಬೂತ್ ಮಟ್ಟದ ಏಜೆಂಟರ ಸಭೆಯಲ್ಲಿ ಅವರ ವ್ಯಾಪ್ತಿಯ ಬೂತ್ಗಳಲ್ಲಿ ಆಗಬೇಕಾದ ಕೆಲಸಗಳ ಕುರಿತು ಚರ್ಚಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಣ್ಣ ಮೋಟಗಿ, ಯುತ್ ಕಾಂಗ್ರೆಸ್ ಅಧ್ಯಕ್ಷ ಬೀರಪ್ಪ ಲಮಾಣಿ, ಕುಬೇರ ತೋಪಿನ್, ಸದ್ದಾಂ ಖಾಜಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-22-1551443121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.