ರಾಣೆಬೆನ್ನೂರು: ಇಲ್ಲಿನ ಹೊರವಲಯದಲ್ಲಿರುವ ಕಮಲಾನಗರದ ರೈತ ಸಂಪರ್ಕ ಕೇಂದ್ರವನ್ನು ಈ ಹಿಂದೆ ಇದ್ದಂತೆ ಹಲಗೇರಿ ವೃತ್ತ ಅಥವಾ ಬಸ್ ನಿಲ್ದಾಣದ ಸಮೀಪ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂ.ಸು ಪಾಟೀಲ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಹಸಿರು ಸೇನೆ ಜಿಲ್ಲಾ ಸಂಚಾಲಕ ಅನಿಲ್ ಡೊಳ್ಳಿನ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ.ಡಿ. ಬಸವರಾಜ್ ಅವರು ಈ ಸಂಬಂಧ, ಸಹಾಯಕ ಕೃಷಿ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು ಮತ್ತು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

ನಗರದಲ್ಲಿ ಹೊಸದಾಗಿ ನಿರ್ಮಿಸಿದ ರೈತ ಸಂಪರ್ಕ ಕೇಂದ್ರವು ಬಸ್ ನಿಲ್ದಾಣದಿಂದ 2 ಕಿ.ಮೀ ದೂರದ ಕಮಲಾನಗರದಲ್ಲಿದ್ದು ಇದರಿಂದ ರೈತರು, ಕೃಷಿ ಸಹಾಯಕರು ದಿನವೂ ತೊಂದರೆ ಪಡುವಂತಾಗಿದೆ ಎಂದು ದೂರಿದರು.

ನಗರದ ಪಶ್ಚಿಮ ಭಾಗದ ಗ್ರಾಮಗಳಿಂದ ಬರುವ ರೈತರು, ರೈತ ಮಹಿಳೆಯರು ಮತ್ತು ವಯೋವೃದ್ಧ ರೈತರು ರೈತ ಸಂಪರ್ಕ ಕೇಂದ್ರಕ್ಕೆ ನಡೆದುಕೊಂಡು ಹೋಗಿ ಬರುವುದು ಅಸಾಧ್ಯವಾಗಿದೆ. ಆಟೊದಲ್ಲಿ ಹೋಗಿ ಬರಬೇಕೆಂದರೆ ನೂರಾರು ರೂಪಾಯಿ ಖರ್ಚು ಬರುತ್ತದೆ. ಗೊಬ್ಬರ, ಬೀಜ ಆಟೊದಲ್ಲಿ ತರಲು ದುಪ್ಪಟ್ಟು ಹಣ ಕೇಳುತ್ತಾರೆ. ಹೀಗಾಗಿ ಮೊದಲಿದ್ದ ರೈತ ಸಂಕರ್ಪ ಕೇಂದ್ರದ ಬಳಿ ಅಥವಾ ಬಸ್ ನಿಲ್ದಾಣ ವೃತ್ತದಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಕೃಷಿ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಚಂ.ಸು. ಪಾಟೀಲ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-22-1296491620

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.