ರಾಣೆಬೆನ್ನೂರು: ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಶಿಕ್ಷಕರು ದಾಖಲಾತಿ ಆಂದೋಲನ ನಡೆಸುತ್ತಿದ್ದಾರೆ. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನೇಕ ಸೌಲಭ್ಯ ನೀಡುತ್ತಿದ್ದು, ಸದ್ಭಳಕೆ ಮಾಡಿಕೊಳ್ಳಬೇಕು. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಹೇಳಿದರು.

ತಾಲ್ಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸರ್ಕಾರಿ ಮಾದರಿ ಕೇಂದ್ರ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಗಂಡು ಮಕ್ಕಳ ಶಾಲೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಶಾಲೆಯು ಕೇವಲ ಅಕ್ಷರ ಕಲಿಸುವ ಕೇಂದ್ರವಲ್ಲದೆ, ಮಕ್ಕಳ ವ್ಯಕ್ತಿತ್ವ ವಿಕಸನದ ತಾಣವಾಗಿ ಕಾರ್ಯ ನಿರ್ವಹಿಸುತ್ತದೆ. ಸರ್ಕಾರವು ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿದೆ. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ತಾಲ್ಲೂಕಿನ ಎಲ್ಲ ಕ್ಲಸ್ಟರ್ಗಳಲ್ಲಿ ದಾಖಲಾತಿ ಆಂದೋಲನ ಕೈಗೊಂಡಿರುವುದು ಪ್ರಸಂಶನೀಯ’ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಯಕ ಮಾತನಾಡಿ, ‘ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿಯಿಂದ 8ನೇ ತರಗತಿವರೆಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲಾಗುವುದು. ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು, ಶುದ್ದ ಕುಡಿಯುವ ನೀರು, ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ವಿದ್ಯಾರ್ಥಿನಿಯರಿಗೆ ಶುಚಿ ಪ್ಯಾಡ್ ವಿತರಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಈ ವೇಳೆ ಗ್ರಾಮದ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪ್ರಭಾಕರ ಚಿಂದಿ, ಸಿಆರ್ಪಿ ರಾಘವೇಂದ್ರ ಮಾಳಮ್ಮನವರ, ಶಿಕ್ಷಕರಾದ ಎಸ್.ಎಲ್. ಹರಿಹರ, ಜಿ.ಆರ್. ಅಂಬಿಗೇರ, ಆರ್.ಎಚ್. ಪ್ರಕಾಶ್ ಕೊಕ್ಕನವರ, ಎಂ.ಎಂ. ಸುತಾರ, ಎಸ್.ಎಚ್. ಮೇಟಿ, ಸರಳಾ ಮೇಟಿ, ವಿ.ವಿ. ಕಡ್ಲಿಗೊಂದಿ, ಜಿ.ಆರ್. ಸಿರೂರ, ಆರ್.ಬಿ. ಕಂದಾಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-22-138770155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.