ರಾಣೆಬೆನ್ನೂರು: ‘ದೇಶದ ಅಭಿವೃದ್ಧಿ ಹಾಗೂ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರು ಸ್ವಯಂ ಜನಗಣತಿಯಲ್ಲಿ ಪಾಲ್ಗೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇದು ಕೇವಲ ಅಂಕಿಅಂಶ ಅಲ್ಲ, ಬದಲಿಗೆ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯದ ನಕಾಶೆ ರೂಪಿಸುವ ಮಹತ್ವದ ಕಾರ್ಯಕ್ರಮವಾಗಿದೆ’ ಎಂದು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದರು.

ನಗರದ ಬಾಗೇಶ ನಗರದಲ್ಲಿ ಭಾನುವಾರ ಸ್ವಯಂ ಜನಗಣತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಇದು ವಿಶೇಷವಾಗಿ ಆರೋಗ್ಯ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಗಣತಿಯು ಪ್ರಮುಖವಾಗಿದೆ. ಯಾವುದೇ ಆತಂಕವಿಲ್ಲದೆ ಪ್ರತಿಯೊಬ್ಬರೂ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಭಾಯಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು’ ಎಂದರು.

ಪೌರಾಯುಕ್ತ ಎಫ್.ವೈ. ಇಂಗಳಗಿ ಮಾತನಾಡಿ, ‘ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಎಲ್ಲ ನಾಗರಿಕರು ತಮ್ಮ ಕುಟುಂಬದ ಮಾಹಿತಿಯನ್ನು ನಿಖರವಾಗಿ ದಾಖಲಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸ್ವಯಂಗಣತಿ ಪೂರ್ಣಗೊಳಿಸಿದ ನಂತರ ಸಿಗುವ ಐಡಿಯನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು’ ಎಂದರು.

ತಹಶೀಲ್ದಾರ್ ಆರ್.ಎಚ್. ಭಗವಾನ್, ಬಿಇಒ ಶ್ಯಾಮ ಸುಂದರ ಅಡಿಗ, ಹಾಗೂ ಜನಗಣತಿ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-22-1719565880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.