ರಾಣೆಬೆನ್ನೂರು: ‘ರಾಜ್ಯದಲ್ಲಿ 52ಲಕ್ಷ ನೇಕಾರ ಸಮಾಜದ ಜನರಿದ್ದು ಸ್ವಂತ ಬಲದಿಂದ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಮ್ಮ ಸಮಾಜದ ಅಭ್ಯರ್ಥಿಗಳಿಗೆ ಕನಿಷ್ಠ 5ರಿಂದ 6 ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಒತ್ತಾಯಿಸಿದರು.

ನಗರದ ಯರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿರುವ ಕಾಕಿ ಜನಸೇವಾ ಸಂಸ್ಥೆಯ ಗಣೇಶೋತ್ಸವ ಮಂಟಪದಲ್ಲಿ ಶನಿವಾರ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ದೇವರ ದಾಸಿಮಯ್ಯ ಉತ್ಸವ ಸಮಿತಿ ಇವರ ಆಶ್ರಯದಲ್ಲಿ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ‘ನೇಕಾರ ಸಮಾಜದ ಅಭಿವೃದ್ಧಿಗೆ ಯಾವಾಗಲೂ ಕಟ್ಟಿಬದ್ಧವಾಗಿದ್ದೇವೆ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಮಾತನಾಡಿ, ಸಮಾಜ ಸಂಘಟನೆಯಾದಾಗ ಮಾತ್ರ ಆರ್ಥಿಕ, ಸಾಮಾಜಿಕ, ರಾಜಕೀಯ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಶಿಕ್ಷಕಿ ಲಕ್ಷ್ಮೀ ಅಡಕಿ ಅವರು ಉಪನ್ಯಾಸ ನೀಡಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ವೈದ್ಯ ಡಾ.ಬಸವರಾಜ ಕೇಲಗಾರ, ದೇವರ ದಾಸಿಮಯ್ಯ ಉತ್ಸವ ಸಮಿತಿ ಅಧ್ಯಕ್ಷ ಬಸವರಾಜ ಲಕ್ಷ್ಮೇಶ್ವರ ಮಾತನಾಡಿದರು. ನಗರದ ದೊಡ್ಡಪೇಟೆ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಮುಕ್ತೇನಹಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಕುರುಹಿನಶೆಟ್ಟಿ ಕೇಂದ್ರ ಸಂಘದ ಸಂಘಟನಾ ಕಾರ್ಯದರ್ಶಿ ಹರೀಶಕುಮಾರ, ಜಿಲ್ಲಾ ನೇಕಾರ ಮಹಿಳಾ ಸಮುದಾಯಗಳ ಒಕ್ಕೂಟದ ಅಧ್ಯಕ್ಷೆ ರಾಜೇಶ್ವರಿ ಇದ್ದರು.

ಇದಕ್ಕೂ ಮುಂಚೆ ನಗರದ ದೊಡ್ಡಪೇಟೆ ಅಂಭಾಭವಾನಿ ದೇವಸ್ಥಾನದ ಬಳಿಯಿಂದ ಹೊರಟ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆ ಎಡಿಬಿ ವೃತ್ತ, ಎಂ.ಜಿ.ರಸ್ತೆ, ದುರ್ಗಾ ವೃತ್ತ, ದೇವರ ದಾಸಿಮಯ್ಯ ವೃತ್ತದ ಮಾರ್ಗವಾಗಿ ಸಮಾರಂಭದ ಸ್ಥಳದಲ್ಲಿ ಮರಳಿ ಬಂದು ಸಂಪನ್ನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-22-1084260294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.