ರಾಣೆಬೆನ್ನೂರು: ಖಾಸಗಿ ಶಾಲಾ ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ನಿಲ್ಲದಿದ್ದರೆ ರಾಣೆಬೆನ್ನೂರ ಬಂದ್ಗೆ ಕರೆ ನೀಡಿ ಎಲ್ಲ ಖಾಸಗಿ ಶಾಲಾ ಕಾಲೇಜುಗಳ ವಿರುದ್ಧ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ವಿಕಾಸ್ ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರಗೌಡ ಎಫ್. ಪಾಟೀಲ ಎಚ್ಚರಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಖಾಸಗಿ ಶಾಲಾ, ಕಾಲೇಜುಗಳ ಮುಖ್ಯಸ್ಥರು ಶಿಕ್ಷಣ ಸಂಸ್ಥೆ ನಡೆಸುವುದನ್ನೇ ಉದ್ದಿಮೆ ಮಾಡಿಕೊಂಡು ವಿದ್ಯಾರ್ಥಿಗಳಿಂದ ಮನ ಬಂದಂತೆ ಹೆಚ್ಚಿನ ಡೊನೇಷನ್ ವಸೂಲಿ ಮಾಡುತ್ತಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

‘ಮೇ 18 ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಅನುದಾನ ರಹಿತ, ರಾಜ್ಯ, ಕೇಂದ್ರ ಪಠ್ಯಕ್ರಮ ಬೋಧನೆ ಮಾಡುತ್ತಿರುವ ಶಾಲಾ ಮುಖ್ಯಸ್ಥರ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಗೆ ಮಠಾಧೀಶರು, ಶಿಕ್ಷಣಾಭಿಮಾನಿಗಳು, ಪೋಷಕರು, ಪಾಲಕರು ಆಗಮಿಸಲಿದ್ದಾರೆ. ಸಭೆಯಲ್ಲಿ ನಮ್ಮ ಬೇಡಿಕೆಗಳು ಈಡೇರದಿದ್ದರೆ, ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮತ್ತೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ’ ಎಂದು ಅವರು ತಿಳಿಸಿದರು.

ಖಾಸಗಿ ಶಾಲೆಗಳು ಎಲ್ಕೆಜಿಯಿಂದ ಎಸ್ಎಸ್ಎಲ್ಸಿಯವರೆಗೆ ಕನಿಷ್ಠ ₹ 40 ರಿಂದ 50 ಸಾವಿರದವರೆಗೂ ಶಿಕ್ಷಣ ಶುಲ್ಕ ಪಡೆಯುತ್ತಿವೆ. ಿದರ ಜೊತೆ ಪಠ್ಯಪುಸ್ತಕ, ಶಾಲಾ ಸಮವಸ್ತ್ರ, ಶಾಲಾ ವಾಹನ ಇತರ ಶುಲ್ಕವನ್ನು ವಿದ್ಯಾರ್ಥಿಗಳು ಭರಿಸಬೇಕಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯಬಾರದು ಎಂದರು.

ಕಲವು ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಆಟದ ಮೈದಾನ, ಮೂಲಸೌಕರ್ಯ ಇಲ್ಲದ ಕಟ್ಟಡಗಳನ್ನು ಬಾಡಿಗೆ ಪಡೆದು ಕಾರ್ಯನಿರ್ವಹಿಸುತ್ತಿವೆ. ಶಿಕ್ಷಣ ಶುಲ್ಕ ಮತ್ತು ಇತರ ಶುಲ್ಕದ ಮಾಹಿತಿಯನ್ನು ಶಾಲಾ ಆವರಣದಲ್ಲಿ ನಾಮಫಲಕ, ಬ್ಯಾನರ್ ಮೂಲಕ ಪ್ರಕಟಿಸಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಠಾಧೀಶರ, ಶಿಕ್ಷಣಾಭಿಮಾನಿಗಳ, ಪೋಷಕರ, ಪಾಲಕರ ನೇತೃತ್ವದಲ್ಲಿ ಹೋರಾಟ ಮಾಡುವುದು ಅನಿವಾರ್ಯ ಆಗುತ್ತದೆ ಎಂದರು.

ನಿತ್ಯಾನಂದ ಕುಂದಾಪುರ, ಜಗದೀಶ ಕೆರೂಡಿ, ಹೊನ್ನಪ್ಪ ಮರಿಯಮ್ಮನವರ, ಮಲ್ಲೇಶ ಮದ್ಲೇರ, ಚಂದ್ರಪ್ಪ ಬಣಕಾರ, ಹರಿಹರಗೌಡ ಪಾಟೀಲ, ಜಮಾಲಸಾಬ್ ಶೇತಸನದಿ, ಶಿವಾಜಿ ಮಾರಾಠಾ, ನಾಗರತ್ನ ರಡ್ಡೇರ, ರಾಜೇಶ್ವರಿ ಪಾಟೀಲ, ಗದಿಗೆಪ್ಪ ಕುರುಬರ, ರವಿ ಮಳ್ಳಳ್ಳಿ, ರಮೇಶ ಕೆಂಪಹನುಮಣ್ಣನವರ, ಗದಿಗೆಮ್ಮ, ಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-23-1187605301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.