ರಾಣೆಬೆನ್ನೂರು: ನಗರದ ಅಂಚೆ ಕಚೇರಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ರಸ್ತೆ ಹದಗೆಟ್ಟು ತೆಗ್ಗು–ಗುಂಡಿಗಳು ಬಿದ್ದಿದ್ದವು. ಈ ಬಗ್ಗೆ ನಗರದ ಜನತೆ ರಸ್ತೆ ದುರಸ್ತಿಗಾಗಿ ಆಗ್ರಹಿಸಿ ನಗರಸಭೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿರಲಿಲ್ಲ. ಆದರೆ ಈಗ ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.

ಅಂಚೆ ಕಚೇರಿ ವೃತ್ತದ ಎಸ್ಬಿಐ ಮೇನ್ ಶಾಖೆಯಿಂದ ಅಂಬೇಡ್ಕರ್ ವೃತ್ತದವರೆಗೆ ಇರುವ ಡಿವೈಡರ್ ರಸ್ತೆಯಲ್ಲಿ ಸಂಪೂರ್ಣ ತೆಗ್ಗುಗುಂಡಿ ಬಿದ್ದಿವೆ. ಇದೇ ರಸ್ತೆಯಲ್ಲಿಯೇ ನಗರಸಭೆ ಇದೆ. ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ, ಮಾಜಿ ಸದಸ್ಯರು ಇದೇ ರಸ್ತೆಯಲ್ಲಿ ನಿತ್ಯ ಸಂಚರಿಸುತ್ತಾರಾದರೂ ರಸ್ತೆ ದುರಸ್ತಿಗೆ ಮುಂದಾಗಿರಲಿಲ್ಲ. ಕಳೆದ ಐದಾರು ತಿಂಗಳಿಂದ ವಾಹನ ಸವಾರರು ಪರದಾಡುತ್ತಿದ್ದು ಕೆಲವರು ಬಿದ್ದು ಗಾಯಗೊಂಡ ಘಟನೆಗಳೂ ನಡೆದಿದ್ದರೂ ದುರಸ್ತಿ ಕಾರ್ಯಕ್ಕೆ ನಗರಸಭೆ ಮುಂದಾಗಿರಲಿಲ್ಲ.

‘ನಗರಸಭೆ ಪಕ್ಕದಲ್ಲಿಯೇ ಹೆರಿಗೆ ಆಸ್ಪತ್ರೆ ಇದ್ದು, ಗರ್ಭಿಣಿಯರನ್ನು ಕರೆದುಕೊಂಡು ಬರಲು ಕಷ್ಟವಾಗುತ್ತಿದೆ. ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ರಸ್ತೆಯ ಗುಂಡಿ ಕಂಡು ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದರು. ಆಟೊಗಳು ಈ ರಸ್ತೆಯಲ್ಲಿ ಚಲಿಸಿ, ಮೇಲಿಂದ ಮೇಲೆ ಹಾಳಾಗಿ, ದುರಸ್ತಿಗೊಳಿಸಬೇಕಿತ್ತು’ ಎಂದು ಆಟೊ ಚಾಲಕರ ಸಂಘದ ಅಧ್ಯಕ್ಷ ಜಗದೀಶ ಕೆರೂಡಿ ದೂರಿದರು.

ಏ.19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ದೊಡ್ಡಪೇಟೆಯ ಬಳಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಹಾಗೂ ನಿಟ್ಟೂರು ಗ್ರಾಮದ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನ 50ನೇ ವರ್ಷದ ಸುವರ್ಣ ಮಹೋತ್ಸವ ಮತ್ತು ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತರಾತುರಿಯಲ್ಲಿ ದಿಢೀರನೇ ರಸ್ತೆಯ ತೆಗ್ಗುಗುಂಡಿಗಳನ್ನು ಮುಚ್ಚುವ ಮೂಲಕ ತೇಪೆ ಹಚ್ಚುವ ಕಾಮಗಾರಿ ಕೈಗೊಂಡಿದ್ದಾರೆ. ಈಗಾಗಲೇ ಎರಡು, ಮೂರು ಬಾರಿ ಅಕಾಲಿಕ ಮಳೆ ಸುರಿದು ಗುಂಡಿಗಳಲ್ಲಿ ನೀರು ತುಂಬಿಕೊಂಡಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-22-1476689083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.