ರಾಣೆಬೆನ್ನೂರು: ವಾಲ್ಮೀಕಿ ಮಹರ್ಷಿಗಳು ಲೋಕ ಕಲ್ಯಾಣಕ್ಕಾಗಿ ರಾಮಾಯಣ ರಚಿಸುವ ಮೂಲಕ ಸರ್ವ ಸಮಾಜಕ್ಕೆ ದಾರಿದೀಪವಾಗಿದ್ದರು. ರಾಮಾಯಣನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವದು ಅಗತ್ಯವಾಗಿದ್ದು, ಧರ್ಮದ ಉಳುವಿಗಾಗಿ ರಾಮಾಯಣ ಮತ್ತು ಮಹಾಭಾರತ ಅವಶ್ಯವಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಯುವ ಸೇವಾ ಸಮಿತಿಯಿಂದ ಶುಕ್ರವಾರ ಮಹರ್ಷಿ ವಾಲ್ಮೀಕಿ ಋಷಿಗಳ ನೂತನ ದೇವ ಸ್ಥಾನದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ದರು.

ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಇಡೀ ವಿಶ್ವಕ್ಕೆ ಸತ್ಯ ನ್ಯಾಯ ನೀತಿ, ಧರ್ಮ ಪಾಲನೆ ಕುರಿತು ರಾಮಾಯಣ ಮತ್ತು ಮಹಾಭಾರತದ ಗ್ರಂಥಗಳಲ್ಲಿ ಸವಿಸ್ತಾರವಾಗಿ ತಿಳಿಸಲಾಗಿದೆ ಎಂದರು.

ಮಾಜಿ ಸಚಿವ ಆರ್ ಶಂಕರ. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಹರಿಹರ ಮಾಜಿ ಶಾಸಕ ರಾಮಪ್ಪ ಮಾತನಾಡಿದರು.

ರವೀಂದ್ರ ಗೌಡ ಪಾಟೀಲ, ಸಣ್ಣತಮ್ಮಪ್ಪ ಬಾರ್ಕಿ, ಬಸವರಾಜ ಚಳಗೇರಿ, ಗಂಗಾಧರ ಬಣಕಾರ, ಪುಟ್ಟಪ್ಪ ಮರಿಯಮ್ಮನವರ, ಚಂದ್ರಪ್ಪ ಬೇಡರ, ಮರದ ಬಸನಗೌಡ್ರ, ಮಂಜನಗೌಡ ಪಾಟೀಲ, ಪರಮೇಶಪ್ಪ ಮೇಗಳಮನಿ, ಕೃಷ್ಣಪ್ಪ ಕಂಬಳಿ, ಶ್ರೀಧರ ಅಂಗಡಿ ಹಾಗೂ ದೇವ್ಥಾನ ಸಮಿತಿ ಪದಾಧಿಕಾರಿಗಳು, ಸಮಾಜದ ಮುಖಂಡರು, ಅಭಿಮಾನಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-22-1505601699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.