ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗುಚಿದ ಬೈಕ್‌: ಹಿಂಬದಿ ಸವಾರ ಸಾವು

Published 3 ಜನವರಿ 2024, 16:07 IST
Last Updated 3 ಜನವರಿ 2024, 16:07 IST
ಅಕ್ಷರ ಗಾತ್ರ

ರಾಣೆಬೆನ್ನೂರು: ತಾಲ್ಲೂಕಿನ ಕಮದೋಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್‌ ರಸ್ತೆಯಲ್ಲಿ ಬೈಕ್‌ ಮಗುಚಿದ್ದರಿಂದ ಹಿಂಬದಿ ಸವಾರ ಮೃತಪಟ್ಟಿದ್ದು, ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಬ್ಯಾಡಗಿ ತಾಲ್ಲೂಕಿನ ಹಿರೇಅಣಜಿ ಗ್ರಾಮದ ಗಣೇಶಪ್ಪ ಜಯಪ್ಪ ದಂಡಿಕೊಪ್ಪ(53) ಮೃತಪಟ್ಟಿದ್ದಾರೆ. ಘಟನೆ ಬಳಿಕ ಬೈಕ್‌ ಸವಾರ ಸೇರಿದಂತೆ ಇಬ್ಬರನ್ನು ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೇ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ಹಲಗೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT