ರಾಣೆಬೆನ್ನೂರು: ಸುಖ ಮತ್ತು ಕಷ್ಟಗಳು ಯಾರನ್ನೂ ಬಿಟ್ಟಿಲ್ಲ. ಅದ್ಭುತವಾದ ಬದುಕು ಕಟ್ಟಿಕೊಳ್ಳಲು ಒಂದು ಕಡೆ ಕಷ್ಟಗಳು ಇರಬೇಕು. ಇನ್ನೊಂದು ಕಡೆ ನಂಬಿಕೆಗಳು ಇರಬೇಕು. ಕಷ್ಟಗಳು ಜೀವನದಲ್ಲಿ ಪಾಠ ಕಲಿಸಿದರೆ ನಂಬಿಕೆಗಳು ಮನುಷ್ಯನಲ್ಲಿ ಶಕ್ತಿ ತುಂಬುತ್ತವೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸೇವಂತಿಗೆ ನಾಡು, ಸ್ಪಟಿಕ ಲಿಂಗಕ್ಕೆ ಪ್ರಸಿದ್ದಿ ಪಡೆದ ಸುಕ್ಷೇತ್ರ ಲಿಂಗದಹಳ್ಳಿ ಗ್ರಾಮದ ರಂಭಾಪುರಿ ಪೀಠದ ಶಾಖಾ ಸಂಸ್ಥಾನ ಹಿರೇಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ಜನ್ಮ ಷಷ್ಠಬ್ದಿ ಅಂಗವಾಗಿ ಗುರುವಾರ ಏರ್ಪಡಿಸಿದ ಜಗದ್ಗುರು ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಜಾಗೃತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಜ್ಜಯಿನಿ ಪೀಠದ ಸಿದ್ಧಲಿಂಗರಾಜ ದೇಶಿಕೇಂದ್ರ ಜಗದ್ಗುರು ಮಾತನಾಡಿ, ವೀರಶೈವ ಧರ್ಮದ ತತ್ವ ಸಿದ್ಧಾಂತಗಳು ಜೀವನ ವಿಕಾಸಕ್ಕೆ ಅಡಿಪಾಯವಾಗಿವೆ ಎಂದರು.

ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ಈಗಿನ ಕಾಲದಲ್ಲಿ ಸತ್ಯದ ಮಾತುಗಳು ಮುಳ್ಳುಗಳಾಗುತ್ತವೆ. ಬಣ್ಣದ ಮಾತುಗಳು ಮುತ್ತುಗಳಾಗುತ್ತವೆ ಎಂದರು.

ಕಾಶಿ ಪೀಠದ ಚಂದ್ರಶೇಖರ ಜಗದ್ಗುರು ಮಾತನಾಡಿ, ಮನುಷ್ಯ ಬಾಳಿ ಬದುಕಲು ನೀರು ಅನ್ನ ಗಾಳಿ ಬೇಕು. ಆದರ್ಶ ವ್ಯಕ್ತಿಯಾಗಿ ಬಾಳಲು ಪೂರ್ವಾಚಾರ್ಯರ ನುಡಿಗಳು ಬೇಕು. ದೇವರು ಮತ್ತು ಧರ್ಮವನ್ನು ಮರೆಯಬಾರದು ಎಂದರು.

ಕಾಶಿ ಪೀಠದ ನೂತನ ಪೀಠಾಧಿಕಾರಿ ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಮಾತನಾಡಿ, ಧರ್ಮದ ಶಕ್ತಿ ಕಾನೂನಿಗಿಂತಲೂ ದೊಡ್ಡದು. ಧರ್ಮವನ್ನು ಅಧರ್ಮಕ್ಕೆ ಬಳಸಿಕೊಳ್ಳಬಾರದು ಎಂದರು.

ಲಿಂಗದಹಳ್ಳಿ ಹಿರೇಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ನೇತೃತ್ವ ವಹಿಸಿ ಮಾತನಾಡಿ, ನದಿಯ ನೀರು ಎಷ್ಟು ತುಂಬಿದರೂ ಅದು ಖಾಲಿಯಾಗುವುದಿಲ್ಲ. ಹಾಗೆಯೇ ಧರ್ಮದ ಅರಿವನ್ನು ಎಷ್ಟು ಅರಿತರೂ ಪೂರ್ಣವಾಗುವುದಿಲ್ಲ. ಬಿಸಿಲು ಹೊತ್ತು ಮರ ನೆರಳು ನೀಡುತ್ತದೆ. ದೀಪ ತಾನು ಉರಿದು ಬೆಳಕು ಕೊಡುತ್ತದೆ. ಅದರಂತೆ ಮಹಾತ್ಮರು ತಾವು ನೋವು ಉಂಡು ನಮಗೆ ನಲಿವನ್ನು ಕೊಟ್ಟಿದ್ದಾರೆ ಎಂದರು.

ರಾಜ್ಯ ಪ್ರಶಸ್ತಿ ವಿಜೇತ ವಿರೇಶ ಕಿತ್ತೂರ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ನಡೆಸಿದರು. ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಸ್ವಾಮೀಜಿ, ಪಶುಪತಿ ಶಿವಾನಂದ ಸ್ವಾಮೀಜಿ, ಸಿದ್ದನಂದೀಶ್ವ ಶ್ರೀಗಳು, ಶ್ರೀಪತಿ ಪಂಡಿತಾರಾಧ್ಯ ಸ್ವಾಮೀಜಿ, ನಾಗನಗೌಡ ಪಾಟೀಲ, ಶನೈಶ್ಚರ ಮಂದಿರದ ಶಿವಯೋಗಿ ಸ್ವಾಮೀಜಿ, ಮಣಕೂರ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ನಾಡಿದ ಹರಗುರು ಚರಮೂರ್ತಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-22-681897596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.