ರಾಣೆಬೆನ್ನೂರು: ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಅಕಾಲಿಕ ಮಳೆ ಹಾಗೂ ಗಾಳಿಗೆ ಹಾನಿಯಾದ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ತಹಶೀಲ್ದಾರ್ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು.

ಹಿರೇಬಿದರಿ ಮತ್ತು ಐರಣಿ ಗ್ರಾಮದಲ್ಲಿ ಹಾನಿಯಾದ ಭತ್ತದ ಬೆಳೆ ಹಾಗೂ ಅಡಿಕೆ, ತರಕಾರಿ ಮತ್ತು ಡ್ರ್ಯಾಗನ್ ಪ್ರೂಟ್ ಬೆಳೆಯನ್ನು ಪರಿಶೀಲಿಸಿದರು.

ತಹಶೀಲ್ದಾರ್ ಆರ್.ಎಚ್. ಭಾಗವಾನ ಮಾತನಾಡಿ, ‘ತಾಲ್ಲೂಕಿನ ಹಿರೇಬಿದರಿ ಮತ್ತು ಐರಣಿ ಗ್ರಾಮದಲ್ಲಿ ಆಣಿಕಲ್ಲು ಮಳೆ, ಬಾರಿ ಗಾಳಿಗೆ ಅಂದಾಜು 1000 ಸಾವಿರ ಹೆಕ್ಟೇರ್ ಭತ್ತ ಬೆಳೆಗೆ ಹಾನಿಯಾಗಿ ಎಂದು ಅಂದಾಜಿಸಲಾಗಿದೆ. ಮಳೆ ಗಾಳಿಗೆ ಅಡಿಕೆ, ತರಕಾರಿ, ಡ್ರ್ಯಾಗನ್ ಪ್ರೂಟ್, ಬಾಳೆ, ಪಪ್ಪಾಯಿ ಮತ್ತು ಸೇವಂತಿ ಬೆಳೆಗಳಿಗೆ ಶೇ 30ರಷ್ಟು ಹಾನಿಯಾಗಿದ್ದು, ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿದ್ದು, ಸರ್ಕಾರಕ್ಕೆ ಬೆಳೆ ಹಾನಿ ಬಗ್ಗೆ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಮಾಜಿ ಶಾಸಕ ಅರುಣಕುಮಾರ ಪೂಜಾರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣವನರ, ಬಿಜೆಪಿ ಮುಖಂಡ ಸಂತೋಷಕುಮಾರ ಪಾಟೀಲ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು.

ಈ ವೇಳೆ ತೋಟಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಯಕ, ಸಹಾಯಕ ಕೃಷಿ ನಿರ್ದೇಶಕಿ ಶಾಂತಮಣಿ ಜಿ ಹಾಗೂ ಕಂದಾಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-22-928676812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.