ರಾಣೆಬೆನ್ನೂರು: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯ ಅಬ್ಬರದಿಂದ ಅಪಾರ ಹಾನಿ ಸಂಭವಿಸಿದ್ದು, ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಒತ್ತಾಯಿಸಿದರು.

ಇಲ್ಲಿನ ಬೀರೇಶ್ವರನಗರದ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಳಂಬ ಮಾಡದೆ ಸಂಕಷ್ಟದಲ್ಲಿರುವ ರೈತರಿಗೆ ವೈಜ್ಞಾನಿಕ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.

ಜೋರಾದ ಮಳೆಯಿಂದ ನಗರದ ವಿವಿಧ ವಾರ್ಡ್ಗಳ ಮನೆ ಮತ್ತು ಅಂಗಡಿಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ಬಡವರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಗಾಳಿ ಸಮೇತ ಸುರಿದ ಮಳೆಯಿಂದ ಕೆಲವು ಶಾಲೆಗಳ ಮೇಲ್ಛಾವಣಿ ಹಾನಿಗೊಳಗಾಗಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು’ ಎಂದರು.

ತಾಲ್ಲೂಕಿನಾದ್ಯಂತ ಹಾನಿಯಾದ ಸ್ಥಳಗಳಿಗೆ ಇದುವರೆಗೂ ಯಾವುದೇ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಅವರು, ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದರು.

ವೈದ್ಯ ಡಾ.ನಾಗೇಶಗೌಡರ, ಎಸ್.ಎಸ್.ಬೆಲ್ಲದ, ಹನುಮಂತರಾಜ್ ಚನ್ನಗೌಡ, ಗಂಗಣ್ಣ ಬೂದನೂರ, ಯುವರಾಜ ಬಾರಟಕ್ಕೆ, ವಿಜಯಕುಮಾರ ಹೆಡಿಯಾಲ, ಸೋಮಣ್ಣ ಹಲಗೇರಿ, ಬಸವರಾಜ ರೊಡ್ಡನವರ, ಪರಶುರಾಮ ಹಾಲ್ಯಾಳ, ಚಂದ್ರಣ್ಣ ಗೋಣಿಬಸಮ್ಮನವರ, ಗುಡ್ಡೇಶ ನಿಟ್ಟೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-696462073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.